ಬೆಂಗಳೂರು: ನಿಮ್ಮ ರಾಜಕೀಯ ಹಿತಾಸಕ್ತಿಗೆ, ಆಕಾಂಕ್ಷೆಗಳಿಗೆ ನೀವು ಹೇಗೆ ದಲಿತ ನಾಯಕರನ್ನು ಬಳಸಿಕೊಂಡಿರಿ ಎಂದು ರಾಜ್ಯದ ದಲಿತ ಸಮುದಾಯಕ್ಕೆ, ಕರ್ನಾಟಕದ ಜನತೆಗೂ ಗೊತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ ಸಿ.ಟಿ. ರವಿ - ದಲಿತ
ನಿಮ್ಮ ರಾಜಕೀಯ ಹಿತಾಸಕ್ತಿಗೆ ಹೇಗೆ ದಲಿತ ನಾಯಕರನ್ನು ಬಳಸಿಕೊಂಡಿರಿ ಎಂದು ಎಲ್ಲರಿಗೂ ಗೊತ್ತಿದೆ ಎಂದು ಸಿ.ಟಿ.ರವಿ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.
ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಹೊಟ್ಟೆಪಾಡಿಗಾಗಿ ದಲಿತರು ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನರ ಹೇಳಿಕೆ ಅವರಿಗೆ ದಲಿತ ನಾಯಕರ ಬಗ್ಗೆ ಎಷ್ಟೊಂದು ಅಸಮಾಧಾನವಿದೆ ಎಂಬುದನ್ನು ತಿಳಿಸುತ್ತಿದೆ. ಸಿದ್ದರಾಮಯ್ಯವರೇ ನಿಮ್ಮ ಸಮಕಾಲಿನ ದಲಿತ ನಾಯಕರುಗಳ ಬಗ್ಗೆ ಇಷ್ಟೊಂದು ಹಗುರವಾಗಿ ಮಾತನಾಡುತ್ತೀರಿ ಎಂದು ಭಾವಿಸಿರಲಿಲ್ಲ ಎಂದಿದ್ದಾರೆ.
ನಿಮ್ಮ ಸಮಕಾಲೀನ ನಾಯಕರಾದ ರಮೇಶ್ ಜಿಗಜಿಣಗಿ, ಕಾರಜೋಳರಂತಹ ನಾಯಕರು ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಹೇಗೆ ದಲಿತೋದ್ಧಾರದಲ್ಲಿ ತೊಡಗಿದ್ದಾರೆ ಮತ್ತು ಎಲ್ಲರ ವಿಶ್ವಾಸ ಗಳಿಸಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಅಂತಹವರ ಬಗ್ಗೆ ಹಗುರವಾಗಿ ಮಾತನಾಡುತ್ತೀರಲ್ಲ, ಇದೇನಾ ನಿಮ್ಮ ದಲಿತಪರ ಕಾಳಜಿ? ಎಂದು ಪ್ರಶ್ನಿಸಿದ್ದಾರೆ.