ಕರ್ನಾಟಕ

karnataka

By

Published : Feb 12, 2020, 9:51 PM IST

ETV Bharat / city

ಸಿಎಎ ವಿರೋಧಿಸಿ ಮಂಗಳೂರಲ್ಲಿ ಪ್ರತಿಭಟನೆ: ಆರೋಪಿಗಳ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಿಎಎ ಮತ್ತು ಎನ್​ಆರ್​ಸಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಎಸಗಿದ ಮತ್ತು ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಿದ ಪ್ರಕರಣದ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

High Court
ಹೈಕೋರ್ಟ್

ಬೆಂಗಳೂರು: ಸಿಎಎ ಮತ್ತು ಎನ್​ಆರ್​ಸಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಎಸಗಿದ ಮತ್ತು ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಿದ ಪ್ರಕರಣದ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಜಾಮೀನು ನೀಡದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಮ್ಮದ್ ಅಜರ್ ಸೇರಿದಂತೆ ಎಲ್ಲಾ ಆರೋಪಿಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಆರೋಪಿಗಳ ಪರ ವಕೀಲ ಲತೀಫ್‌ ಬಿ. ಅವರು ವಾದ ಮಂಡಿಸಿ, ಪ್ರಕರಣದಲ್ಲಿ ಪೊಲೀಸರು ಸುಳ್ಳು ಆರೋಪ ಮಾಡಿದ್ದಾರೆ. ಘಟನೆ ನಡೆದ ದಿನ ಕಕ್ಷಿದಾರರು ಸ್ಥಳದಲ್ಲೇ ಇರಲಿಲ್ಲ. ಹಾಗಿದ್ದೂ ಒಂದು ವರ್ಗದ ಕೋಮಿನ ಯುವಕರನ್ನು ಗುರಿ ಮಾಡಿ ಈ ದೂರು ದಾಖಲಿಸಿದ್ದಾರೆ ಎಂದರು.

ಸರ್ಕಾರದ ಪರ ವಕೀಲರು ಇದಕ್ಕೆ ಆಕ್ಷೇಪಿಸಿ, ಆರೋಪಿಗಳು ಭಾಗಿಯಾಗಿರುವ ಬಗ್ಗೆ ಪೊಲೀಸರ ಬಳಿ ಸಾಕಷ್ಟು ಸಾಕ್ಷಿ ಆಧಾರಗಳಿವೆ. ಘಟನೆಯ ವಿಡಿಯೋ ಸೇರಿದಂತೆ ಹಲವು ಸಾಕ್ಷಿಗಳಿವೆ ಎಂದರು. ವಾದ ಪ್ರತಿವಾದ ಆಲಿಸಿದ ಪೀಠ, ಅರ್ಜಿಯ ತೀರ್ಪನ್ನು ಫೆ.17ಕ್ಕೆ ಕಾಯ್ದಿರಿಸಿತು.

ಪ್ರಕರಣದ ಹಿನ್ನಲೆ:ಕಳೆದ 2019 ರ ಡಿಸೆಂಬರ್ 19 ರಂದು ಸಿಎಎ ವಿರೋಧಿಸಿ ಮಂಗಳೂರಲ್ಲಿ ಪ್ರತಿಭಟನೆ ನಡೆದಿತ್ತು. ಸುಮಾರು 1,500 ರಿಂದ 2,000 ಮಂದಿ ಯುವಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ಕಲ್ಲು, ಬಾಟೆಲ್, ಗಾಜುಗಳ ತೂರಾಟ ಮಾಡಿದ್ದರೆಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆೆಯಲ್ಲಿ ಆರೋಪಿಗಳು ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಿದ್ದರು. ಆದರೆ ವಿಚಾರಣಾ ನ್ಯಾಯಾಲಯ ಜಾಮೀನು ತಿರಸ್ಕರಿಸಿ, ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ABOUT THE AUTHOR

...view details