ಬೆಂಗಳೂರು:ಇಂದು ಅಥವಾ ನಾಳೆಯೊಳಗೆ ಸಚಿವ ಸಂಪುಟ ರಚನೆ ಕುರಿತು ಸಂದೇಶ ಬರುವ ಸಾಧ್ಯತೆ ಇದೆ. ಹೈಕಮಾಂಡ್ನಿಂದ ಸಂದೇಶ ಬಂದ ಕೂಡಲೇ ಸಚಿವ ಸಂಪುಟ ರಚನೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ರಚನೆ ಸಂಬಂಧ ಹೈಕಮಾಂಡ್ ಸಂದೇಶವನ್ನು ಎದುರು ನೋಡಲಾಗುತ್ತಿದೆ. ವರಿಷ್ಠರು ಸಂದೇಶ ನೀಡುತ್ತಿದ್ದಂತೆ ಸಂಪುಟ ರಚನೆ ಪ್ರಕ್ರಿಯೆ ಆರಂಭ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.