ಕರ್ನಾಟಕ

karnataka

ETV Bharat / city

ಕೋರಮಂಗಲದಲ್ಲಿ ಮತ್ತೊಂದು ಕಾರು ಅಪಘಾತ, ಚಾಲಕ ವಶಕ್ಕೆ

ಕೋರಮಂಗಲದ ಸೆಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗ್ತಿದೆ.

Car accident in Koramangala
ನಜ್ಜುಗುಜ್ಜಾದ ಕಾರು

By

Published : Oct 22, 2021, 1:21 PM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಸುಜುಕಿ ಬಲೆನೋ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಘಟನೆ ಕೋರಮಂಗಲ ಬಳಿಯ ಸೆಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ನಡೆದಿದೆ.

ಕೋರಮಂಗಲದಲ್ಲಿ ಮತ್ತೊಂದು ಕಾರು ಅಪಘಾತ..

ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಚಾಸ್ಸಿ ಕಟ್ ಆಗಿ ನೂರು ಮೀಟರ್ ದೂರ ಬಿದ್ದಿದೆ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗ್ತಿದೆ.

ಪ್ರಾಣಾಪಾಯದಿಂದ ಪಾರು:

ಅಪಘಾತದ ವೇಳೆ ಕಾರಿನಲ್ಲಿದ್ದ ಎರಡು ಕಡೆ ಏರ್ ಬ್ಯಾಗ್ ಓಪನ್ ಆಗಿವೆ. ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದ ಇಬ್ಬರೂ ಯುವಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಡಿವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಕಾರು ಚಾಲಕ ಮತ್ತು ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಕಾರು ಅಪಘಾತ ಪ್ರಕರಣಕ್ಕೆ ದಿನಕ್ಕೊಂದು ತಿರುವು: ಘಟನೆ ನಡೆದ ಎರಡು ದಿನ ಮುಂಚೆ ಪಿಜಿ ಬಳಿ ಕರುಣಾ ಸಾಗರ್​​

ABOUT THE AUTHOR

...view details