ಕರ್ನಾಟಕ

karnataka

ETV Bharat / city

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಹೊತ್ತಿ ಉರಿದ ಬೆಂಕಿಗೆ ಆಹುತಿಯಾದ ಕಾರು ಚಾಲಕ - car driver dies

ಹೊಸೂರು-ಧರ್ಮಪುರಿ ಮಾರ್ಗದಲ್ಲಿ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಹಾಗೂ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಕಾರಿನ ಚಾಲಕ ಸುಟ್ಟು ಕರಕಲಾದ ಘಟನೆ ನಡೆದಿದೆ.

bng

By

Published : Nov 12, 2019, 12:27 PM IST

ಬೆಂಗಳೂರು:ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನ ಚಾಲಕ ಸುಟ್ಟು ಕರಕಲಾದ ಘಟನೆ ನಡೆದಿದೆ.

ತಡರಾತ್ರಿ ಹೊಸೂರು-ಧರ್ಮಪುರಿ ಮಾರ್ಗವಾಗಿ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಕಾರಿಗೆ ಅಪ್ಪಳಿಸಿದಾಗ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಬೆಂಕಿ ಲಾರಿಗೂ ಹಬ್ಬಿದೆ.

ಹೊತ್ತಿ ಉರಿಯುತ್ತಿರುವ ವಾಹನಗಳು

ಕೂಡಲೇ ಕಾರಿನ ಹಿಂಬದಿ ಸೀಟಿನಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು ಚಾಲಕ ಕಾರಿನಲ್ಲೇ ಸಿಲುಕಿದ್ದ. ಕಾರಿನಲ್ಲಿದ್ದ ಚಾಲಕ ಬೆಂಕಿಯಿಂದ ಸುಟ್ಟು ಕರಕಲಾಗಿದ್ದಾನೆ.

ಕೂಡಲೇ ಉದ್ದನಪಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟರೂ ಎರಡೂ ವಾಹನಗಳು ಸುಟ್ಟು ಭಸ್ಮವಾಗಿವೆ. ಗಾಯಗೊಂಡ ಮಹಿಳೆಯನ್ನು ಬೆಂಗಳೂರಿನ ಸೈಂಟ್ ಜಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ABOUT THE AUTHOR

...view details