ಕರ್ನಾಟಕ

karnataka

ETV Bharat / city

ಅನಧಿಕೃತ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ದೂರು ದಾಖಲು ; ಗೌರವ್ ಗುಪ್ತ ವಾರ್ನ್‌ - ಬಿಬಿಎಂಪಿ ವಲಯದಲ್ಲಿ ಅನಧಿಕೃತ ಬ್ಯಾನರ್ ತೆರವು

ಇವುಗಳನ್ನು ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗುತ್ತಿದೆ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇನ್ಮುಂದೆ ಈ ರೀತಿಯ ಘಟನೆಗಳು ನಡೆದರೆ ಎಫ್‌ಐಆರ್ ದಾಖಲು ಮಾಡಲು ಬಿಬಿಎಂಪಿ ನಿರ್ಧರಿಸಿದೆ.‌.

case-filed-aginst-those-who-installs-the-flex-in-the-city-bbmp
ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ

By

Published : Feb 23, 2022, 2:57 PM IST

ಬೆಂಗಳೂರು :ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್‌ಐಆರ್ ದಾಖಲಿಸಲು ಎಲ್ಲಾ ವಲಯದ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆ ನೀಡಿದ್ದಾರೆ.

ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ಮುಖ್ಯ ಇಂಜಿನಿಯರ್‌ಗಳ ನೇತೃತ್ವದ ತಂಡವು ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್ಸ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್‌ ತೆರವು ಕಾರ್ಯಾಚರಣೆಯನ್ನು ತೀವ್ರಗತಿಯಲ್ಲಿ ನಡೆಸುತ್ತಿದೆ.

ನಗರದಲ್ಲಿ ಇನ್ನು ಮುಂದೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸುವುದು ಕಂಡು ಬಂದಲ್ಲಿ ಕೂಡಲೇ ತಪ್ಪಿತಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಅಂಗಡಿ-ಮುಂಗಟ್ಟು, ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಹಾಗೂ ಅಳತೆಗೆ (ಪಿಪಿಪಿ ಯೋಜನೆಗಳು ಸೇರಿದಂತೆ) ಅಳವಡಿಸಲು ಅವಕಾಶವಿದೆ.

ಇವುಗಳನ್ನು ಹೊರತುವಡಿಸಿ ಇತರ ಯಾವುದೇ ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದು, ಎಲ್‌ಇಡಿ ಜಾಹೀರಾತುಗಳನ್ನು ಪ್ರದರ್ಶಿಸುವುದು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ-ಸಮಾರಂಭಗಳ ಕುರಿತ ಜಾಹೀರಾತು/ಪ್ರಕಟಣೆಗಳ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಬಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದೆ.

ಇವುಗಳನ್ನು ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗುತ್ತಿದೆ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇನ್ಮುಂದೆ ಈ ರೀತಿಯ ಘಟನೆಗಳು ನಡೆದರೆ ಎಫ್‌ಐಆರ್ ದಾಖಲು ಮಾಡಲು ಬಿಬಿಎಂಪಿ ನಿರ್ಧರಿಸಿದೆ.‌

ಓದಿ :ಒಂದೇ ಕುಟುಂಬದ ಮೂವರನ್ನು ಆರು ಬಾರಿ ಕಚ್ಚಿದ ಹಾವು: ಹಾವಿನ ದ್ವೇಷ?

ABOUT THE AUTHOR

...view details