ಬೆಂಗಳೂರು:ನಿಷೇಧಾಜ್ಞೆ ನಡುವೆಯೂ ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ಸಿವಿಲ್ ಕೋರ್ಟ್ ಮುಂಭಾಗ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯಾಯಾಲಯದ ಮುಂದೆ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮೂರು ದಿನಗಳ 144 ಸೆಕ್ಷನ್ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಮಾತನಾಡಿ, ಈವರೆಗೂ 244 ಜನರನ್ನ ವಶಕ್ಕೆ ಪಡೆಯಲಾಗಿದೆ. 10 ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದೇವೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಇಂದಿನ ಪರಿಸ್ಥಿತಿ ನೋಡಿಕೊಂಡು ಸಂಜೆ 144 ಸೆಕ್ಷನ್ ರದ್ದುಪಡಿಸುವ ಕುರಿತು ಮಾಹಿತಿ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ವಶಕ್ಕೆ ಪಡೆದ ಎಲ್ಲರನ್ನೂ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇಲ್ಲಿ ಪ್ರತಿಭಟನೆ ನಡೆಸಿದವರು ಅಲ್ಪಸಂಖ್ಯಾತರು ಕಡಿಮೆ. ಅಲ್ಲದೆ, ಎಲ್ಲರೂ ಹೊರ ರಾಜ್ಯದವರೇ ಹೋರಾಟದಲ್ಲಿ ಬೀದಿಗಿಳಿದಿದ್ದರು. ಕಾಯ್ದೆ ತಿದ್ದುಪಡಿ ಜಾರಿಗೆ ಒತ್ತಾಯಿಸಲು ಮುಂದೆ ಬರುತ್ತಿದ್ದಾರೆ. ಅವರಿಗೂ ಅವಕಾಶ ಕೊಡುವುದಿಲ್ಲ. ನಾಳೆ ನ್ಯಾಷನಲ್ ಕಾನೂನು ಶಾಲೆಯಲ್ಲಿ ಸಭೆ ನಡೆಸಲಿದ್ದೇವೆ ಎಂದು ಹೇಳಿದರು.
ಕಾಯಿದೆ ಪರ ಪ್ರತಿಭಟನೆ ಮಾಡುವವರಿಗೂ ಬೇಡ ಅಂದಿದ್ದೇನೆ. ಬಹಳ ಜನಕ್ಕೆ ಈ ಕಾಯಿದೆ ಬಗ್ಗೆ ಅರಿವಿಲ್ಲ. ವರ್ಷದ ಆರಂಭದಿಂದ ಇಲ್ಲಿಯವರೆಗೂ ಶಾಂತಿಯುತವಾಗಿದ್ದು, ವರ್ಷದ ಕೊನೆಯಲ್ಲೂ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಮನವಿ ಮಾಡಿದರು.