ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ನಡೆಸಲಾಗಿದ್ದ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿಗಣತಿ) ಸಮೀಕ್ಷಾ ವರದಿಯನ್ನು ತಿರಸ್ಕರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.
ಜಾತಿ ಗಣತಿ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ಚಿಂತನೆ? - Caste Census Report
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ನಡೆಸಲಾಗಿದ್ದ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿಗಣತಿ) ಸಮೀಕ್ಷಾ ವರದಿಯನ್ನು ತಿರಸ್ಕರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.

ಜಾತಿ ಗಣತಿ ವರದಿ ಬಿಡುಗಡೆ ಮಾಡದಿರಲು ಸರ್ಕಾರ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗದ ಆಯೋಗದಿಂದ ಗಣತಿ ನಡೆಸಲಾಗಿತ್ತು. ₹190 ಕೋಟಿ ವೆಚ್ಚದಲ್ಲಿ ನಡೆದಿದ್ದ ಆರ್ಥಿಕ ಹಾಗೂ ಶೈಕ್ಷಣಿಕ ಅಂಶಗಳುಳ್ಳ ಜಾತಿ ಗಣತಿ ವರದಿ ಬಿಡುಗಡೆ ಇದುವರೆಗೂ ಸಾಧ್ಯವಾಗಿಲ್ಲ.
ವರದಿಯಲ್ಲಿನ ಅಂಶಗಳು ಬಿಡುಗಡೆಗೂ ಮುನ್ನವೇ ಬಹಿರಂಗ ಆಗಿದ್ದವು. ಜಾತಿ ಗಣತಿ ಸಮರ್ಪಕವಾಗಿ ನಡೆದಿಲ್ಲ. ರಾಜಕೀಯ ದುರುದ್ದೇಶದಿಂದ ವರದಿ ತಯಾರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಂದು ಪ್ರತಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿಯಿಂದಲೂ ಈ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಈಗ ಅಧಿಕೃತವಾಗಿ ವರದಿ ತಿರಸ್ಕರಿಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಅಧಿಕೃತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.