ಕರ್ನಾಟಕ

karnataka

ETV Bharat / city

ಸ್ಯಾಂಡಲ್​​ವುಡ್​ಗೆ ಡ್ರಗ್ಸ್​ ನಂಟು ಆರೋಪ: ಅಕುಲ್​​ ಸೇರಿ ಮೂವರು ಪ್ರಭಾವಿಗಳಿಗೆ ಸಿಸಿಬಿ ನೋಟಿಸ್

ಸ್ಯಾಂಡಲ್​​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣ ಸಂಬಂಧ ನಿರೂಪಕ, ನಟ ಅಕುಲ್ ಬಾಲಾಜಿ ಸೇರಿ ಮೂವರು ಪ್ರಭಾವಿಗಳಿಗೆ ಸಿಸಿಬಿ ನೋಟಿಸ್ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

CCB officials served notice to Akul Balaji, Yuvaraj, Santosh Kumar
ಅಕುಲ್​​ ಸೇರಿ ಪ್ರಭಾವಿಗಳಿಗೆ ಸಿಸಿಬಿ ನೋಟಿಸ್

By

Published : Sep 18, 2020, 2:32 PM IST

ಬೆಂಗಳೂರು:ಸ್ಯಾಂಡಲ್​​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಇದೀಗ ನಟ ಹಾಗೂ ಟಿವಿ ಕಾರ್ಯಕ್ರಮಗಳ ನಿರೂಪಕ ಅಕುಲ್ ಬಾಲಾಜಿ, ನಿರ್ಮಾಪಕ ಸಂತೋಷ್ ಕುಮಾರ್ ಮತ್ತು ಮಾಜಿ ಶಾಸಕ ಆರ್ ವಿ ದೇವರಾಜ್ ಅವರ ಮಗ ಯುವರಾಜ್​​ಗೆ ನೋಟಿಸ್ ನೀಡಿದ್ದಾರೆ.

ಪ್ರಕರಣ ಸಂಬಂಧ ನಟಿ ರಾಗಿಣಿ, ಸಂಜನಾ, ಪ್ರತೀಕ್ ಶೆಟ್ಟಿ, ವೈಭವ್ ಜೈನ್ ಹಾಗೂ ಇತರೆ ಆರೋಪಿಗಳಿಂದ ಮಾಹಿತಿ ಪಡೆದಿರುವ ಸಿಸಿಬಿ ಪೊಲೀಸರು, ನಾಳೆ ಬೆಳಗ್ಗೆ 10 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಈ ಮೂವರಿಗೆ ಸೂಚನೆ ನೀಡಿದ್ದಾರೆ.

ನಾಳೆ ಮೂವರ ಬಳಿಯಿಂದ ಮೊಬೈಲ್​​ಗಳನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಎಫ್ಎಸ್ಎಲ್ ಕಚೇರಿಗೆ ರವಾನೆ ಮಾಡಲಿದ್ದಾರೆ.

ಐಂದ್ರಿತಾ ಹಾಗೂ ದಿಗಂತ್ ವಿಚಾರಣೆ ವೇಳೆ ಕೂಡ ಅಕುಲ್ ಮತ್ತು ಸಂತೋಷ್ ಹೆಸರು ಪ್ರಸ್ತಾಪವಾಗಿದೆ. ಪ್ರತೀಕ್ ಶೆಟ್ಟಿ ನಡೆಸಿದ್ದ ಪಾರ್ಟಿಗಳಲ್ಲಿ ಯಾರೆಲ್ಲಾ ಭಾಗಿಯಾಗ್ತಿದ್ರು ಅನ್ನೋ ಕುರಿತಂತೆ ಅಧಿಕಾರಿಗಳಿಗೆ ದಿಗಂತ್ - ಐಂದ್ರಿತಾ ಮಾಹಿತಿ ನೀಡಿದ್ದರು ಎನ್ನಲಾಗ್ತಿದೆ.

ABOUT THE AUTHOR

...view details