ಕರ್ನಾಟಕ

karnataka

ETV Bharat / city

ಡಕಾಯಿತಿಗೆ ಹೊಂಚು: ರೌಡಿಶೀಟರ್ ಸೇರಿ ನಾಲ್ವರ ಬಂಧಿಸಿದ ಸಿಸಿಬಿ - ರೌಡಿಶೀಟರ್​ ಸೇರಿ ನಾಲ್ವರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಶೇಷ, ಕೀರ್ತಿ, ಗೌತಮ್ ಹಾಗೂ ಕೃಷ್ಣ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ccb
ಸಿಸಿಬಿ

By

Published : Jan 6, 2022, 5:53 PM IST

ಬೆಂಗಳೂರು:ಡಕಾಯಿತಿಗೆ ಸಂಚು ರೂಪಿಸುತ್ತಿದ್ದ ಆರೋಪದಡಿ ನಟೋರಿಯಸ್ ರೌಡಿಶೀಟರ್ ಆದ ಕುಣಿಗಲ್ ಗಿರಿ ಬಣದಲ್ಲಿ ಗುರುತಿಸಿಕೊಂಡಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಶೇಷ, ಕೀರ್ತಿ, ಗೌತಮ್ ಹಾಗೂ ಕೃಷ್ಣ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶೇಷ ಹಾಗೂ ಆತನ ಗ್ಯಾಂಗ್ ವಿರುದ್ಧ 10ಕ್ಕಿಂತ ಹೆಚ್ಚು ಅಪರಾಧ ಪ್ರಕರಣ ದಾಖಲಾಗಿವೆ. ಕಳೆದ ವಾರವಷ್ಟೇ ಡಕಾಯಿತಿ ಪ್ರಕರಣದಲ್ಲಿ ಭಾಗಿಯಾಗಿದ್ದರು. ಕ್ರೈಂ ಚಟುವಟಿಕೆಗಳಲ್ಲಿ ಭಾಗಿಯಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದರು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಡಕಾಯಿತಿಗೆ ಸಂಚು ರೂಪಿಸುವಾಗ ರೆಡ್ ಹ್ಯಾಂಡ್​ ಆಗಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.‌

ಇವರ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಿನ ಒಂದೇ ಠಾಣೆಯ 14 ಪೊಲೀಸರಿಗೆ ಕೋವಿಡ್

For All Latest Updates

ABOUT THE AUTHOR

...view details