ಕರ್ನಾಟಕ

karnataka

ETV Bharat / city

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಕೇಸ್: ಐಸಿಸಿ, ಬಿಸಿಸಿಐಗೆ ತನಿಖಾ ಮಾಹಿತಿ ನೀಡಿದ ಸಿಸಿಬಿ - ಕರ್ನಾಟಕ ಪ್ರೀಮಿಯರ್ ಲೀಗ್ ಮ್ಯಾಚ್ ಫಿಕ್ಸಿಂಗ್ ಕೇಸ್

ಕರ್ನಾಟಕ ಪ್ರೀಮಿಯರ್ ಲೀಗ್​ನಲ್ಲಿ ನಡೆದ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖಾ ಮಾಹಿತಿಯನ್ನು ಐಸಿಸಿ ಹಾಗೂ ಬಿಸಿಸಿಐಗೆ ನೀಡಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ‌.

ಸಿಸಿಬಿ
ಸಿಸಿಬಿ

By

Published : Nov 29, 2019, 4:30 PM IST

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್​ನಲ್ಲಿ ನಡೆದ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖಾ ಮಾಹಿತಿಯನ್ನು ಐಸಿಸಿ ಹಾಗೂ ಬಿಸಿಸಿಐಗೆ ನೀಡಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ‌.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಅಟಗಾರರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಐಸಿಸಿ ಹಾಗೂ ಬಿಸಿಸಿಐಗೆ ತನಿಖಾ ಮಾಹಿತಿಯನ್ನು ನೀಡುತ್ತಿದ್ದೇವೆ. ಅವರಿಂದಲೂ ಸಹ‌ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಐಸಿಸಿ ಹಾಗೂ ಬಿಸಿಸಿಐ ಕೂಡ ತನಿಖೆಯ ಬಗ್ಗೆ ಮಾಹಿತಿಯನ್ನು ಕೇಳಿವೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಹಲವು ಅಂತಾರಾಷ್ಟ್ರೀಯ ಬುಕ್ಕಿಗಳು ಭಾಗಿಯಾಗಿರುವ ಸಾಧ್ಯತೆಯಿದೆ. ಹೀಗಾಗಿ ನಾವು ಕೂಡ ಕೆಲ ಮಾಹಿತಿಯನ್ನು ಐಸಿಸಿ ಹಾಗೂ ಬಿಸಿಸಿಐ ಬಳಿ ಕೇಳಿದ್ದೇವೆ ಎಂದರು.

ಕೆಲ ದಿನಗಳ ಹಿಂದೆ ಕರ್ನಾಟಕ ರಣಜಿ ತಂಡದ ಪ್ರಮುಖ ಆಟಗಾರ ಅಭಿಮನ್ಯು ಮಿಥುನ್, ವಿನಯ್ ಕುಮಾರ್ ಅವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿತ್ತು.

ABOUT THE AUTHOR

...view details