ಬೆಂಗಳೂರು: ನಗರದಲ್ಲಿ ಮನೆ ಮಾಡಿ ಕೇರಳ ರಾಜ್ಯಕ್ಕೆ ಡ್ರಗ್ ಸಪ್ಲೈ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.
ಜೂಜು ಅಡ್ಡೆ, ಡ್ರಗ್ ಪೆಡ್ಲರ್ ಮನೆ ಮೇಲೆ ಸಿಸಿಬಿ ದಾಳಿ - ಒಂದು ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಕ್ರಿಸ್ಟಲ್ ಸೀಜ್
ವಿದೇಶದಿಂದ ಡ್ರಗ್ಸ್ ತರಿಸಿಕೊಂಡು ಕೇರಳದ ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಡ್ರಗ್ ಪೆಡ್ಲರ್ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಿ, ಒಂದು ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಕ್ರಿಸ್ಟಲ್ ಅನ್ನು ಸೀಜ್ ಮಾಡಲಾಗಿದೆ.
ಆರೋಪಿ ತಾಜ್ ಉದ್ದೀನ್ ಅನ್ನು ಬಂಧಿಸಿರುವ ಪೊಲೀಸರು ಅವರಿಂದ ಸುಮಾರು ಒಂದು ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಕ್ರಿಸ್ಟಲ್ ಅನ್ನು ಸೀಜ್ ಮಾಡಿದ್ದಾರೆ. ವಿದೇಶಿ ಪ್ರಜೆಗಳಿಂದ ಡ್ರಗ್ ತರಿಸಿಕೊಳ್ಳುತ್ತಿದ್ದ ಆರೋಪಿ, ಅವುಗಳನ್ನು ಕೇರಳದ ಕಾಲೇಜು ವಿದ್ಯಾರ್ಥಿಗಳಿಗೆ ಸಪ್ಲೈ ಮಾಡುತ್ತಿದ್ದ. ಗೋವಿಂದಪುರದಲ್ಲಿ ರೂಮ್ ಮಾಡಿದ್ದ ಆರೋಪಿ ಕಳೆದ ಕೆಲ ವರ್ಷಗಳಿಂದ ನಗರದಲ್ಲಿ ನೆಲಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಅಂದರ್ ಬಾಹರ್ ಅಡ್ಡದ ಮೇಲೆ ಸಿಸಿಬಿ ದಾಳಿ:ಇದರ ಜೊತೆಗೆ ನಗರದ ಕಾಮಾಕ್ಷಿಪಾಳ್ಯದಲ್ಲಿ ಅಂದರ್ ಬಾಹರ್ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ, 1.10ಲಕ್ಷ ರೂಪಾಯಿ ನಗದನ್ನು ಸೀಜ್ ಮಾಡಿ ನಾಲ್ವರನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ.