ಬೆಂಗಳೂರು :ಶ್ರೀಲಂಕಾದ ಕೊಲಂಬೊದ ಕ್ಯಾಸಿನೋ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಗುಳಿ ಕೆನ್ನೆ ನಟ ದಿಗಂತ್ ಹಾಗೂ ಪತ್ನಿ ಐಂದ್ರಿತಾ ರೇ ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.
ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸುತ್ತಿದ್ದ ಶೇಖ್ ಫಾಜಿಲ್ ಆಯೋಜಿಸುತ್ತಿದ್ದ ಪಾರ್ಟಿಯಲ್ಲಿ ಭಾಗಿಯಾಗಿರುವುದಾಗಿ ಐಂದ್ರಿತಾ ರೇ ಹೇಳಿಕೆ ನೀಡಿದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ನಾಳೆ ಬೆಳಗ್ಗೆ 11 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ಜಾರಿಯಾಗಿದೆ.