ಕರ್ನಾಟಕ

karnataka

ETV Bharat / city

ಸಿಡಿ ಕೇಸ್: ಅರ್ಜಿದಾರರ ವಾದ ಆಲಿಸಲು ವಿಚಾರಣೆ ಮುಂದೂಡಿದ ಹೈಕೋರ್ಟ್ - ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಅಪ್​ಡೇಟ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

ಸಿಡಿ ಕೇಸ್
ಸಿಡಿ ಕೇಸ್

By

Published : Sep 14, 2021, 8:02 PM IST

Updated : Sep 14, 2021, 8:41 PM IST

ಬೆಂಗಳೂರು: ಅರ್ಜಿದಾರರ ವಾದ ಆಲಿಸುವ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ವಕೀಲ ಎಸ್.ಉಮೇಶ್ ಹಾಗೂ ತನಿಖೆಗೆ ಎಸ್‌ಐಟಿ ರಚಿಸಿರುವ ನಗರ ಪೊಲೀಸ್ ಆಯುಕ್ತರ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಯುವತಿ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿ, ಅರ್ಜಿ ವಿಚಾರಣೆಯನ್ನು ಒಂದು ದಿನ ಮುಂದೂಡುವಂತೆ ಕೋರಿದರು. ರಾಜ್ಯ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿ, ತನಿಖೆ ಆರಂಭವಾದ ಬಳಿಕ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದರಂತೆ ತನಿಖೆ ಮುಕ್ತಾಯವಾದ ನಂತರ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾಗುತ್ತದೆ. ಈಗಾಗಲೇ ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ತನಿಖೆಯ ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣದಲ್ಲಿ ಎಸ್‌ಐಟಿ ತನಿಖೆಯನ್ನೇ ಸಂತ್ರಸ್ತ ಯುವತಿ ಪ್ರಶ್ನಿಸಿದ್ದಾರೆ. ಹೀಗಾಗಿ, ಅವರ ವಾದವನ್ನೂ ಆಲಿಸಬೇಕಿದೆ ಎಂದು ತಿಳಿಸಿ, ಯುವತಿ ಪರ ವಕೀಲರ ಮನವಿಯಂತೆ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ನಿಗದಿಪಡಿಸಿತು.

Last Updated : Sep 14, 2021, 8:41 PM IST

ABOUT THE AUTHOR

...view details