ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ಸುರಿದ ಭಾರಿ ಮಳೆಗೆ ಸಿಲುಕಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಮಹಾರಾಷ್ಟ್ರ ಸೇರಿದಂತೆ ಕರ್ನಾಟಕಕ್ಕೂ ರಾಜ್ಯ ವಿಪತ್ತು ಪರಿಹಾರ ನಿಧಿ ( SDRF) ಅಡಿಯಲ್ಲಿ ಪರಿಹಾರ ಹಣ ಘೋಷಿಸಲಾಗಿದೆ.
ಮಳೆ ಅಬ್ಬರದಿಂದ ಬೆಳೆಹಾನಿ: ಕೇಂದ್ರದಿಂದ ರಾಜ್ಯಕ್ಕೆ 629.03 ಕೋಟಿ ರೂ. ಪರಿಹಾರ ಘೋಷಣೆ - ಬೆಳೆ ಹಾನಿ ಪರಿಹಾರ ನಿಧಿ ಬಿಡುಗಡೆ
ವರುಣಾರ್ಭಕ್ಕೆ ರಾಜ್ಯದಲ್ಲಿ ಉಂಟಾದ ನೆರೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಈ ನಿಟ್ಟಿನಲ್ಲಿ ಪರಿಹಾರ ಘೋಷಿಸಿರುವ ಕೇಂದ್ರ ಸರ್ಕಾರವು ರಾಜ್ಯಕ್ಕೆ 629.03 ಕೋಟಿ ರೂ. ಪರಿಹಾರ ಧನ ಘೋಷಿಸಲಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ನೆರೆ ಪರಿಹಾರ
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯಕ್ಕೆ 629.03 ಕೋಟಿ, ಮಹಾರಾಷ್ಟ್ರಕ್ಕೆ 701.00 ಕೋಟಿ ರೂ. ಬಿಡುಗಡೆ ಮಾಡಲು ಸರ್ಕಾರ ಅನುಮತಿಸಿದ್ದು, ದೇಶದ ರೈತರ ಹಿತ ಕಾಪಾಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ರಾಜಸ್ಥಾನದಲ್ಲಿ ಉಂಟಾದ ಬರದ ಹಿನ್ನೆಲೆ, 113.69 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Last Updated : Jul 27, 2021, 4:45 PM IST