ಬೆಂಗಳೂರು:ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ತಡರಾತ್ರಿ 1:20ರ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ನಗರದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ರಾಜ್ಯದ ಸಚಿವರುಗಳಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಡಾ.ಅಶ್ವತ್ ನಾರಾಯಣ್, ವಿ ಸೋಮಣ್ಣ, ಎಸ್.ಟಿ ಸೋಮಶೇಖರ್, ಬೈರತಿ ಬಸವರಾಜ ಸೇರಿದಂತೆ ಅನೇಕ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.
ಬೆಂಗಳೂರಿಗೆ ಆಗಮಿಸಿರುವ ಅಮಿತ್ ಶಾ ಅವರು ಬೆಳಗ್ಗೆ 11 ಗಂಟೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ 'ಸಂಕಲ್ಪ ಸಿದ್ಧಿ' 3ನೇ ಆವೃತ್ತಿಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಯಲಹಂಕದ ಮದರ್ ಡೈರಿಗೆ ಭೇಟಿ ನೀಡಲಿದ್ದು, ಬಳಿಕ ಡೈರಿ ಸರ್ಕಲ್ ಬಳಿ ಇರುವ ಕೆಎಂಎಫ್ ಪ್ರಧಾನ ಕಚೇರಿಗೆ ಭೇಟಿ ನೀಡಲಿದ್ದಾರೆ.