ಬೆಂಗಳೂರು:ಕೇಂದ್ರ ಸರ್ಕಾರ ರಾಜ್ಯಕ್ಕೆ 2022ರ ಮೇ 31ರ ವರೆಗಿನ 8,633 ಕೋಟಿ ರೂ ಜಿಎಸ್‌ಟಿ ಪರಿಹಾರ ಮಂಜೂರು ಮಾಡಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ₹ 8,633 ಕೋಟಿ GST ಪರಿಹಾರ ಮಂಜೂರು - ಕೇಂದ್ರದಿಂದ ಕರ್ನಾಟಕಕ್ಕೆ ಜಿಎಸ್‌ಟಿ ಪರಿಹಾರ
ಕೇಂದ್ರ ರಾಜ್ಯಗಳಿಗೆ ನೀಡಬೇಕಾದ 86,912 ಕೋಟಿ ರೂ. ಜಿಎಸ್‌ಟಿ ಪರಿಹಾರ ನೀಡಿದೆ. ಈ ಪೈಕಿ 8,633 ಕೋಟಿ ರೂ. ಪರಿಹಾರವನ್ನು ರಾಜ್ಯಕ್ಕೆ ಮಂಜೂರು ಮಾಡಿದೆ.
ಕೇಂದ್ರ ರಾಜ್ಯಗಳಿಗೆ ನೀಡಬೇಕಾದ 86,912 ಕೋಟಿ ರೂ. ಜಿಎಸ್‌ಟಿ ಪರಿಹಾರ ನೀಡಿದೆ. ಈ ಪೈಕಿ 8,633 ಕೋಟಿ ರೂ.ಪರಿಹಾರ ರಾಜ್ಯಕ್ಕೆ ಮಂಜೂರು ಮಾಡಿದೆ. ಈ ಜೂನ್ವರೆಗೆ ಜಿಎಸ್‌ಟಿ ಪರಿಹಾರ ನೀಡಲಾಗುತ್ತದೆ. ಬಳಿಕ ಪರಿಹಾರ ಸ್ಥಗಿತಗೊಳ್ಳಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆ ಚುನಾವಣಾ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ರಾಜ್ಯಕ್ಕೆ ಜಿಎಸ್‌ಟಿ ಪರಿಹಾರ ಹಣ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ:ಬಾಕಿಯಿರುವ 12,909 ಕೋಟಿ ರೂ. ಜಿಎಸ್‌ಟಿ ಪರಿಹಾರ ಹಣ ಕೇಂದ್ರ ಪಾವತಿಸಲಿದೆ: ಬಸವರಾಜ ಬೊಮ್ಮಾಯಿ