ಬೆಂಗಳೂರು:ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ನಾಳೆ (ಸೋಮವಾರ) ಪ್ರಕಟವಾಗಲಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಇಲಾಖೆ ಸಚಿವ ಅಶ್ವತ್ಥ್ ನಾರಾಯಣ, ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತಿದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ.
ಫಲಿತಾಂಶವು ನಾಳೆ ಸಂಜೆ 4 ಗಂಟೆಯ ನಂತರ ಪ್ರಕಟವಾಗಲಿದ್ದು, https://cetonline.karnataka.gov.in/kea/ಈಲಿಂಕ್ನಲ್ಲಿ ಲಭ್ಯವಿರಲಿದೆ. ಒಟ್ಟು 2,01,834 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿದ್ದರು. ಇದರಲ್ಲಿ ಹಾಜರಾದವರ ಸಂಖ್ಯೆ ಹೀಗಿದೆ..
- ಜೀವಶಾಸ್ತ್ರ ವಿಷಯ- 1,62,439 (80.48%)
- ಗಣಿತ ವಿಷಯ- 1,89,522 (92.90%)
- ಭೌತಶಾಸ್ತ್ರ ವಿಷಯ- 1,93,588 (95.91%)
- ರಸಾಯನಶಾಸ್ತ್ರ- 1,93,522 (95.88%)
ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಮಾನದಂಡಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗಿತ್ತು. ಕೋವಿಡ್ ಪಾಸಿಟಿವ್ ಇದ್ದ 12 ಅಭ್ಯರ್ಥಿಗಳು ಕೂಡ ಹಾಜರಾಗಿ ಪರೀಕ್ಷೆ ಬರೆದಿದ್ದರು.