ಬೆಂಗಳೂರು: ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡುತ್ತಿರುವ ಪ್ರಕರಣಗಳು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಮೊಮ್ಮಗನನ್ನು ಶಾಲೆಯಿಂದ ಕರೆತರುವ ವೇಳೆ ಮಹಿಳೆಯ ಸರ ಎಗರಿಸಿದ ಖದೀಮ! - ಬೆಂಗಳೂರು ಸರ ಕಳ್ಳತನ ನ್ಯೂಸ್
ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡುತ್ತಿರುವ ಪ್ರಕರಣಗಳು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಮಹಿಳೆಯ ಸರಗಳ್ಳತನ ಮಾಡಿದ ಖದೀಮ
ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಿಡ್ಡಪ್ಪನ ಹಳ್ಳಿಯಲ್ಲಿ ಅಜ್ಜಿಯೊಬ್ಬರು ಮೊಮ್ಮಗನನ್ನು ಶಾಲೆಯಿಂದ ಮನೆಗೆ ಕರೆದೊಯ್ಯುವಾಗ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಖದೀಮನೋರ್ವ ನೋಡು ನೋಡುತ್ತಿದ್ದಂತೆ ಸರ ಕಸಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕೂಗಾಡಿದ್ದಾರೆ. ಆದ್ರೆ ಸರ ಕಸಿದುಕೊಳ್ಳುವ ಭರದಲ್ಲಿ ಆಕೆಯ ಮೇಲೆ ಹಲ್ಲೆ ಮಾಡಿ, ಕೊರಳಿನಲ್ಲಿದ್ದ 40 ಗ್ರಾಂ. ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾನೆ.
ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿದೆ.