ಬೆಂಗಳೂರು :ಪ್ರತಿಪಕ್ಷದ ಸದಸ್ಯರ ಸಭಾತ್ಯಾಗದ ನಡುವೆ 2021ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಇಂದು ಅಂಗೀಕಾರ ದೊರೆಯಿತು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕ ಮಂಡನೆ ಮಾಡಿದರು.
ಇದಕ್ಕೆ ಪ್ರತಿಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಯೂನಿವರ್ಸಿಟಿ ಚಾಣಕ್ಯ ಹೌದೋ, ಇಲ್ಲವೋ.. ಆದರೆ ಈ ಬಿಲ್ ಹಿಂದೆ ಇರುವವರು ಚಾಣಕ್ಯರು ಎಂದು ಕಾಂಗ್ರೆಸ್ ಸದಸ್ಯ ರಮೇಶ್ ಕುಮಾರ್ ಚಾಟಿ ಬೀಸಿದರು.