ಕರ್ನಾಟಕ

karnataka

ETV Bharat / city

ದಾವೋಸ್ ಪ್ರವಾಸ ವಿಸ್ತರಣೆ: ಶುಕ್ರವಾರ ಬೆಂಗಳೂರಿಗೆ ವಾಪಸ್​ ಆಗಲಿರುವ ಸಿಎಂ - World Economic forum

ದಾವೋಸ್​ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಉದ್ಯಮಿಗಳ ಜತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವರು.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

By

Published : May 26, 2022, 8:09 AM IST

ಬೆಂಗಳೂರು: ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಪ್ರವಾಸವನ್ನು ಒಂದು ದಿನ ವಿಸ್ತರಣೆ ಮಾಡಿದ್ದಾರೆ. ಇಂದು ರಾಜ್ಯಕ್ಕೆ ವಾಪಸ್​ ಆಗುವ ಬದಲು ಶುಕ್ರವಾರ ಆಗಮಿಸಲಿದ್ದಾರೆ.

ಇಂದು ಬೆಳಗ್ಗೆ ಒಂಬತ್ತು ಗಂಟೆಗೆ ದಾವೋಸ್​ನಿಂದ ಬೆಂಗಳೂರಿಗೆ ವಾಪಸ್​ ಆಗಬೇಕಿದ್ದ ಸಿಎಂ, ಕೊನೆ ಕ್ಷಣದಲ್ಲಿ ಪ್ರವಾಸ ಮುಂದೂಡಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಇಚ್ಚಿಸಿರುವ ಉದ್ಯಮಿಗಳ ಜತೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾದ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. ಸಿಎಂ ಜೊತೆ ಸಚಿವರಾದ ಮುರುಗೇಶ್ ನಿರಾಣಿ, ಡಾ.ಅಶ್ವತ್ಥ್​ ನಾರಾಯಣ್ ಕೂಡ ಉಪಸ್ಥಿತರಿದ್ದಾರೆ.

ಈಗಾಗಲೇ ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:ಮುಖ್ಯಮಂತ್ರಿ ದಾವೋಸ್ ಪ್ರವಾಸ: ಮೆ: ಲುಲು ಗ್ರೂಪ್ ಜೊತೆ ಒಡಂಬಡಿಕೆಗೆ ಸಹಿ

ABOUT THE AUTHOR

...view details