ಕರ್ನಾಟಕ

karnataka

ETV Bharat / city

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದ ನಗರವನ್ನಾಗಿ ಮಾಡುತ್ತೇವೆ: ಸಿಎಂ ಬೊಮ್ಮಾಯಿ

ಸಂಚಾರ ದಟ್ಟಣೆ ನಿಯಂತ್ರಣದ ಕುರಿತು ಸಭೆ ನಡೆದಿದ್ದೇನೆ, ಸಂಚಾರ ನಿಯಂತ್ರಣಕ್ಕಾಗಿ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ. ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನ ತೆಗೆದುಕೊಂಡು ಬೆಂಗಳೂರನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದೇವೆ. ಬೆಂಗಳೂರು ಮಹಾನಗರದ ಮೇಲಿನ ಒತ್ತಡ ಕಡಿಮೆ ಮಾಡಲು ಉಪನಗರಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡುತ್ತಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Jul 1, 2022, 1:51 PM IST

Updated : Jul 1, 2022, 2:06 PM IST

ಬೆಂಗಳೂರು: ರಾಜಧಾನಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದ ನಗರವನ್ನಾಗಿ ಮಾಡುವ ಸಂಕಲ್ಪವಿದ್ದು, ಖಂಡಿತ ನಾವು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಗಂಗಾನಗರ ಬಡಾವಣೆಯಲ್ಲಿ ಪಿಎಸ್ಆರ್ ಬಿಲ್ಡರ್ಸ್, ಗ್ರಾಸ್‌ ರೂಟ್, ಎಬಿಎಸ್ಎಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದು ಏರ್ಪಡಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಉತ್ಸವ ಉದ್ಘಾಟಿಸಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರವನ್ನು ಪ್ರದಾನ ಮಾಡಿದರು. ನಂತರ ಮಾತನಾಡಿದ ಸಿಎಂ, ಈಗಾಗಲೇ ನಗರೋತ್ಥಾನ ಯೋಜನೆಯಡಿ 6,000 ಕೋಟಿ ರೂಪಾಯಿಗಳ ಕೆಲಸ ಪ್ರಾರಂಭವಾಗಿದೆ.

ರಾಜಕಾಲುವೆ ಅಭಿವೃದ್ಧಿಗೆ 1,600 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ. ಉಪನಗರ ರೈಲ್ವೆ ಯೋಜನೆಗೆ ಈಗಾಗಲೇ ಪ್ರಧಾನಿ ಅಡಿಗಲ್ಲು ಹಾಕಿದ್ದಾರೆ. ಪೆರಿಫೆರಲ್ ರಸ್ತೆಗೆ ಟೆಂಡರ್ ಆಗಿದೆ, ಸದ್ಯದಲ್ಲೇ ಅದಕ್ಕೂ ಅಡಿಗಲ್ಲು ಹಾಕಲಾಗುತ್ತದೆ, ನಮ್ಮ ಮೆಟ್ರೋ ವಿಸ್ತರಣೆ ಆಗುತ್ತಿದೆ ಮತ್ತು ನಗರದ ಸೌಂದರ್ಯೀಕರಣಕ್ಕೆ ಎಲ್ಲ ಕೆರೆಗಳ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದರು.

ಕೆಂಪೇಗೌಡರ 513ನೇ ಜಯಂತಿ ಉತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ

ಮಹಾನಗರದ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿದ್ದೇವೆ. ಬಡವರು ಇರುವ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಯೋಜನೆಯ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ, ಬೆಂಗಳೂರನ್ನ ಅಂತಾರಾಷ್ಟ್ರೀಯ ಮಟ್ಟದ ನಗರವನ್ನಾಗಿ ಮಾಡುವುದು ನಮ್ಮ ಸಂಕಲ್ಪ. ಖಂಡಿತ ನಾವು ಇದನ್ನು ಮಾಡಿಯೇ ಮಾಡುತ್ತೇವೆ ಎಂದರು.

ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ

ಕಾಂಗ್ರೆಸ್, ಜೆಡಿಎಸ್ ಆಡಳಿತ ಟೀಕಿಸಿದ ಸಿಎಂ:ಈ ಹಿಂದೆ ಆಡಳಿತ ನಡೆಸಿದವರು ಈ ಕೆಲಸಗಳನ್ನು ಮಾಡದ ಕಾರಣ ಹಲವಾರು ಸಮಸ್ಯೆಗಳು ಇಂದು ನಮಗೆ ಒದಗಿ ಬಂದಿವೆ. ಕಾಲಕಾಲಕ್ಕೆ ರಾಜಕಾಲವೆಗಳನ್ನ ಮಾಡಿದ್ದರೆ, ಕಾಲಕಾಲಕ್ಕೆ ರಸ್ತೆಗಳ ಅಭಿವೃದ್ಧಿ ಮಾಡಿದ್ದರೆ, ಒಳಚರಂಡಿ ವ್ಯವಸ್ಥೆ ಮೊದಲೇ ಮಾಡಿದ್ದರೆ ಇಂದು ಈ ಸಮಸ್ಯೆ ಬರುತ್ತಿರಲಿಲ್ಲ.

ಇವತ್ತು ನಾವು ಕಾವೇರಿ ಐದನೇ ಹಂತದ ಕುಡಿಯುವ ನೀರನ್ನು ಕೊಡಬೇಕು, ಒಳಚರಂಡಿ ವ್ಯವಸ್ಥೆಯನ್ನು ಮಾಡಬೇಕು, ಬೇರೆ ಬೇರೆ ಭಾಗಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು, ಮತ್ತೆ ರಸ್ತೆಗಳನ್ನ ಕೂಡ ಮಾಡಬೇಕಿದೆ. ಇದು ನಮ್ಮ ಮುಂದಿರುವ ಸವಾಲು. ಈ ಸವಾಲನ್ನು ನಾನು ಸ್ವೀಕಾರ ಮಾಡಿದ್ದೇನೆ, ಈಗಾಗಲೇ ಈ ಸಂಬಂಧ ಎಲ್ಲ ಕಡೆ ಕೆಲಸ ಪ್ರಾರಂಭ ಮಾಡಲಾಗಿದೆ.

ಬರುವ ದಿನಗಳಲ್ಲಿ ಈ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಿ ಬೆಂಗಳೂರನ್ನು ಸುಂದರ ನಗರವನ್ನಾಗಿ ಮಾಡಲಾಗುತ್ತದೆ. ಜನರ ಅನುಕೂಲಕ್ಕಾಗಿ ಎಲ್ಲ ಕೆಲಸವನ್ನು ಮಾಡಲಾಗುತ್ತದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಂಚಾರದ ದಟ್ಟಣೆ ನಿಯಂತ್ರಣದ ಕುರಿತು ಸಭೆ ನಡೆದಿದ್ದೇನೆ, ಸಂಚಾರ ನಿಯಂತ್ರಣಕ್ಕಾಗಿ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ. ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನ ತೆಗೆದುಕೊಂಡು ಬೆಂಗಳೂರನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದೇವೆ. ಬೆಂಗಳೂರು ಮಹಾನಗರದ ಮೇಲಿನ ಒತ್ತಡ ಕಡಿಮೆ ಮಾಡಲು ಉಪನಗರಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡುತ್ತಿದ್ದೇವೆ. ದೂರ ದೃಷ್ಟಿ ಇರಿಸಿಕೊಂಡು ಬೆಂಗಳೂರು ನಾಗರಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎನ್ನುವ ದೃಷ್ಟಿಯಿಂದ ಎಲ್ಲರಿಗೂ ಮೂಲ ಸೌಕರ್ಯ ಸಿಗಬೇಕು ಎಂದು ನಾವು ಕೆಲಸವನ್ನ ಮಾಡುತ್ತಿದ್ದೇವೆ ಎಂದರು.

ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಉತ್ಸವ

ಪಾಲಿಕೆ ಟಾರ್ಗೆಟ್: ಮುಂದಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದು ಜನರ ಸೇವೆಯನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತಾರೆ. ಈಗ ನಾವು ಮಾಡಿರುವ ಯೋಜನೆಗಳನ್ನು ಅವರವರ ವಾರ್ಡ್​ಗಳಲ್ಲಿ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡಿದರೆ ಖಂಡಿತ ಜನ ನಮ್ಮೆಲ್ಲರನ್ನ ಹರಸಿ ಆಶೀರ್ವಾದ ಮಾಡಲಿದ್ದಾರೆ ಎಂದರು. ಇದೇ ವೇಳೆ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಭೇದ-ಭಾವವಿಲ್ಲದೆ ಎಲ್ಲ ವಾರ್ಡ್ ಗಳಲ್ಲಿ ಸಮಗ್ರ ಅಭಿವೃದ್ಧಿಯನ್ನು ನಾವು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು‌.

ಕಟ್ಟಾ ಸುಬ್ರಮಣ್ಯ ನಾಯ್ಡು ಸೇವೆ ಕೊಂಡಾಡಿದ ಸಿಎಂ: ಕಟ್ಟಾ ಸುಬ್ರಮಣ್ಯ ನಾಯ್ಡು ಎಂದರೆ ಒಂದು ರೀತಿಯ ಎನರ್ಜಿ ಇದ್ದ ರೀತಿ, ಅವರಲ್ಲಿ ಸದಾ ಕಾಲ ಚಲನಶೀಲತೆ ಇರುತ್ತದೆ. ಏನಾದರೂ ಮಾಡುತ್ತಲೇ ಇರುತ್ತಾರೆ. ವಿಶೇಷವಾಗಿ, ಈ ಕ್ಷೇತ್ರದ ಬಗ್ಗೆ ಅವರಿಗೆ ಅನ್ಯೂನ್ಯವಾದ ಸಂಬಂಧವಿದೆ, ಈಗ ಅವರು ಚುನಾವಣೆಗೆ ನಿಲ್ಲದೆ ಇದ್ದರೂ ಇಲ್ಲಿನ ಜನತೆಯ ಜೊತೆಗೆ ಸಂಪರ್ಕವನ್ನು ಇರಿಸಿಕೊಂಡಿದ್ದಾರೆ. ಬಡವರ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ.

ಯಾರು ಈ ರೀತಿ ಜನರ ಕೆಲಸವನ್ನು ಮಾಡುತ್ತಾ ಬರುತ್ತಾರೋ ಅವರು ಜನ ನಾಯಕರಾಗುತ್ತಾರೆ, ಪ್ರಜಾಪ್ರಭುತ್ವದಲ್ಲಿ ಜನರ ಹೃದಯದಲ್ಲಿ ಸ್ಥಾನ ಪಡೆದುಕೊಳ್ಳುವುದು ಬಹಳ ಮುಖ್ಯ. ಯಾರು ಜನರ ಹೃದಯದಲ್ಲಿ ಸ್ಥಾನ ಪಡೆದುಕೊಂಡಿರುತ್ತಾರೋ ಅವರಿಗೆ ಖಂಡಿತ ಜನರ ಆಶೀರ್ವಾದ ಸಿಗಲಿದೆ. ಅಂತಹ ಕೆಲಸವನ್ನು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾಡಿದ್ದಾರೆ, ಸದಾ ಕಾಲ ಜನರ ಮನಸಲ್ಲಿ ಉಳಿಯುವ ಕೆಲಸವನ್ನು ಮಾಡಿದ್ದಾರೆ. ಅವರಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದರು.

ಕಟ್ಟಾ ಸುಬ್ರಮಣ್ಯ ನಾಯ್ಡು ಇವತ್ತು 5,000 ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಂಡಿರುವುದು ಸಣ್ಣ ಕೆಲಸವಲ್ಲ. ಇನ್ನು ಐದು ಸಾವಿರ ಮಕ್ಕಳನ್ನ ದತ್ತು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. 10,000 ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡುತ್ತಿದ್ದಾರೆ. ದತ್ತು ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಸಹಾಯ ಕೊಡುವ ಮುಖಾಂತರ ಅವರೆಲ್ಲರು ಉತ್ತಮ ಭವಿಷ್ಯ ಪಡೆಯುವಂತಹ ಕೆಲಸ ಮಾಡುತ್ತಿದ್ದಾರೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಯಾವ ಯಾವ ಕಾರ್ಯಕ್ರಮ ಮಾಡುತ್ತಾರೆ ಅವೆಲ್ಲವೂ ಜನಪರವಾದ ಕಾರ್ಯಕ್ರಮವಾಗಿರುತ್ತವೆ, ಅವೆಲ್ಲವೂ ಯಶಸ್ವಿಯಾಗಲಿ ಎಂದು ಶುಭ ಕೋರಿದರು.

ಸಮಾರಂಭದಲ್ಲಿ ಅರಣ್ಯ ಸಚಿವ ಉಮೇಶ ಕತ್ತಿ, ಶಿಕ್ಷಣ ಸಚಿವ ಬಿ ಸಿ ನಾಗೇಶ್, ಮಾಜಿ ಸಚಿವ ಕಟ್ಟಸುಬ್ರಮಣ್ಯ ನಾಯ್ಡು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಏನ್ ಜೀವರಾಜ ಎಂಸಿಎ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ:16 ಬಂಡಾಯ ಶಾಸಕರ ಅಮಾನತು ಕೋರಿ ಸುಪ್ರೀಂಗೆ ಶಿವಸೇನಾ ಅರ್ಜಿ

Last Updated : Jul 1, 2022, 2:06 PM IST

ABOUT THE AUTHOR

...view details