ಕರ್ನಾಟಕ

karnataka

ETV Bharat / city

ಶ್ರೀರಾಮುಲುಗೆ ಕೊರೊನಾ... ಶೀಘ್ರ ಗುಣಮುಖರಾಗುವಂತೆ ಸಿಎಂ, ಬಿಜೆಪಿ ನಾಯಕರಿಂದ ಹಾರೈಕೆ - bangalore news

ಆರೋಗ್ಯ ಸಚಿವ ಬಿ.ಶ್ರೀರಾಮುಲು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಹಾರೈಸಿದ್ದಾರೆ.‌

Chief Minister BS Yeddyurappa and bjp minister tweet
ಶ್ರೀರಾಮುಲುಗೆ ಕೊರೊನಾ ದೃಢ...ಶೀಘ್ರ ಗುಣಮುಖರಾಗುವಂತೆ ಸಿಎಂ, ಬಿಜೆಪಿ ನಾಯಕರ ಹಾರೈಕೆ

By

Published : Aug 9, 2020, 9:15 PM IST

ಬೆಂಗಳೂರು:ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಹಾರೈಸಿದ್ದಾರೆ.‌

ಶ್ರೀರಾಮುಲುಗೆ ಕೊರೊನಾ ದೃಢ...ಶೀಘ್ರ ಗುಣಮುಖರಾಗುವಂತೆ ಸಿಎಂ, ಬಿಜೆಪಿ ನಾಯಕರ ಹಾರೈಕೆ

ಆರೋಗ್ಯ ಸಚಿವ ಶ್ರೀರಾಮುಲು ಅತಿ ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸಕ್ರಿಯರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಚಿವ ಸಂಪುಟದ ಸಹೋದ್ಯೋಗಿ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ಸುದ್ದಿ ತಿಳಿದು ನನಗೆ ನೋವಾಗಿದೆ. ಆದಷ್ಟು ಬೇಗ ಶ್ರೀರಾಮುಲು ಅವರು ಗುಣಮುಖರಾಗಿ ಬರಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಇನ್ನು, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಶೀಘ್ರ ಗುಣಮುಖರಾಗಿ, ನಿತ್ಯ ಜನಸೇವೆಗೆ ಹಿಂತಿರುಗುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details