ಕರ್ನಾಟಕ

karnataka

ETV Bharat / city

ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದ ಸಿಎಂ

ಇಂದು ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಆತ್ಮಸ್ಥೈರ್ಯ ತುಂಬಿದ್ದಾರೆ.

Chief Minister BS Yeddyurappa
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

By

Published : Jul 14, 2020, 1:31 PM IST

ಬೆಂಗಳೂರು:ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ, ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ ಎಂದು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧೈರ್ಯ ತುಂಬಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲಾ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ, ವಿಶ್ವಾಸ ಕಳೆದುಕೊಳ್ಳದೆ ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ, ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ-ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ ಎಂದು ಹೇಳಿದ್ದಾರೆ. ಆಗಸ್ಟ್​​ ಕೊನೆಯ ವಾರ ಅಥವಾ ಸೆಪ್ಟೆಂಬರ್​ ಮೊದಲ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ.

ABOUT THE AUTHOR

...view details