ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಾಯಕತ್ವ ಬದಲಾವಣೆ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯೆ ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರೋ ಒಂದಿಬ್ಬರು ಮೊದಲಿನಿಂದಲೂ ನಾಯಕತ್ವ ಬದಲಾವಣೆ ಮಾತನಾಡುತ್ತಿದ್ದಾರೆ. ಅವರಿಗೆ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಅವಕಾಶ ನೀಡಲಾಗಿಲ್ಲ. ಅವರ ಮೇಲೆ ಯಾವ ಕ್ರಮ ಕೈಗೊಳ್ಳಬೇಕೆಂಬುದನ್ನು ನಮ್ಮ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಮ್ಮಲ್ಲಿ ಯಾವುದೇ ರಾಜಕೀಯ ಗೊಂದಲ ಇಲ್ಲ. ಎಲ್ಲವೂ ಇಲ್ಲಿ ಹೇಳಲು ಆಗುವುದಿಲ್ಲ. ಕೋರ್ ಕಮಿಟಿಯಲ್ಲಿ ಪ್ರವಾಹ, ರಾಜಕೀಯ ಪರಿಸ್ಥಿತಿಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.
ಹೆಚ್.ವಿಶ್ವನಾಥ್ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಅವರ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿದೆ. ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಮಳೆ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳ ಜೊತೆ ನಾಳೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತೇವೆ. ನಾಳೆ ಮಹಾರಾಷ್ಟ್ರ ನೀರಾವರಿ ಸಚಿವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅವರ ಜೊತೆ ಚರ್ಚೆ ಮಾಡ್ತೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆಯಾಗುತ್ತಿದೆ. ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಯಾವುದೇ ಕೊರತೆ ಬಾರದಂತೆ ಕ್ರಮ ಕೈಗೊಳ್ಳಲಾಗುವುದು. ಇನ್ನು, ಕೊರೊನಾ ಮೂರನೇ ಅಲೆ ಸಂಭವವಿದೆ. ಇದರ ನಡುವೆಯೂ ಕೆಲವೊಂದು ವಿನಾಯಿತಿ ನೀಡಬೇಕಾಗುತ್ತದೆ. ಶನಿವಾರ ಸಂಜೆ ಅನ್ಲಾಕ್ ವಿಚಾರವಾಗಿ ಸಭೆ ಇದೆ. ಅಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಮಠದ ಸ್ವಾಮೀಜಿಗಳು ರಾಜಕೀಯ ಮಾಡಬಾರದು: ಹೆಚ್ಡಿಕೆ