ಬೆಂಗಳೂರು: ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳ ಪುನರಾರಂಭ ಕುರಿತು ಎಲ್ಲರ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅಧಿಕಾರಿಗಳ ಸಭೆ ನಂತರ ಶಾಲೆ ಆರಂಭ ಕುರಿತು ನಿರ್ಧಾರ: ಸಿಎಂ ಬಿಎಸ್ವೈ - Chief minister statement on Schools opens in karnataka
ಶಾಲಾರಂಭ ವಿಚಾರ ಕುರಿತು ಇಂದು ವಿಧಾನಸೌಧದಲ್ಲಿ ಸಭೆ ಮಾಡುತ್ತಿದ್ದೇವೆ. ಎಲ್ಲರ ಅಭಿಪ್ರಾಯ, ಸಲಹೆ ಪಡೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ವಿಧಾನಸೌಧಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾರಂಭ ವಿಚಾರ ಕುರಿತು ಇಂದು ವಿಧಾನಸೌಧದಲ್ಲಿ ಸಭೆ ಮಾಡುತ್ತಿದ್ದೇವೆ. ಎಲ್ಲರ ಅಭಿಪ್ರಾಯ, ಸಲಹೆ ಪಡೆದು ಚರ್ಚಿಸಿಯೇ ನಿರ್ಧಾರಕ್ಕೆ ಬರುತ್ತೇವೆ ಎಂದರು.
ಐಎಂಎ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಬಂಧನದ ಕುರಿತ ಪ್ರತಿಕ್ರಿಯಿಸಿದ ಸಿಎಂ, ರೋಷನ್ ಬೇಗ್ ಬಂಧನದ ಬಗ್ಗೆ ನಾನೇನು ಹೇಳಲಿ? ಕಾನೂನು ಏನಿದೆಯೋ ಅದರಂತೆ ಕ್ರಮ ತಗೆದುಕೊಳ್ಳಲಾಗುತ್ತದೆ. ಅದಕ್ಕಿಂತ ಯಾರೂ ಮೇಲಲ್ಲ ಎಂದರು.