ಮಹದೇವಪುರ (ಬೆಂಗಳೂರು): ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಎನ್ಜಿಟಿ, ಬಿಡಿಎ ಮತ್ತು ಬಿಬಿಎಂಪಿ ಅಧಿಕಾರಿಗಳೊಂದಿಗೆ ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.
ಬೆಳ್ಳಂದೂರು, ವರ್ತೂರು ಕೆರೆಗಳಿಗೆ ಭೇಟಿ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆರೆಗಳ ಉದ್ದಗಲಕ್ಕೂ ಸಂಚರಿಸಿ, ಕೆರೆಗಳ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಬೆಳ್ಳಂದೂರು ಮತ್ತು ವರ್ತೂರು ಕೆರೆಗಳಲ್ಲಿ ಹೂಳು ತೆಗೆಯುತ್ತಿರುವ ಬಗ್ಗೆ ಮಾಹಿತಿ ಪಡೆದರು.
ಕೆರೆಯಲ್ಲಿನ ಹೂಳು ತೆಗೆದು ಅಭಿವೃದ್ಧಿ ಮಾಡಲು ಕೆರೆಯ ಎರಡು ಅಂಚಿನಲ್ಲಿ ಕೊಳಚೆ ನೀರು ಹರಿದು ಹೋಗಲು ಕಾಲುವೆ ನಿರ್ಮಾಣ ಮಾಡಲಾಗಿದೆ. ಕೆರೆ ಅಭಿವೃದ್ಧಿ ನಂತರ ಕೊಳಚೆ ನೀರನ್ನು ಶುದ್ದೀಕರಣ ಮಾಡಿ ಮತ್ತೆ ಆ ನೀರನ್ನು ಕೆರೆಗೆ ಹಾಯಿಸಲಾಗುತ್ತದೆ ಎಂದು ಅಧಿಕಾರಿಗಳು ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿದರು.
ಬೆಳ್ಳಂದೂರು, ವರ್ತೂರು ಕೆರೆಗಳಿಗೆ ಭೇಟಿ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆರೆಗಳಲ್ಲಿ ತೆಗೆಯುತ್ತಿರುವ ಹೂಳನ್ನು ಉಚಿತವಾಗಿ ನೀಡುವಂತೆ, ಬಫರ್ ಝೋನ್ನಲ್ಲಿ ತಾತ್ಕಾಲಿಕವಾಗಿ ಸಾಕು ಪ್ರಾಣಿಗಳ ಶೆಡ್ ನಿರ್ಮಿಸಲು ಅವಕಾಶ ಮಾಡಿಕೊಡುವಂತೆ ಹಾಗೂ ದನಗಳ ಸಾಕಾಣಿಕೆಗೆ ಕೆರೆಯ ಕೆಲವೆಡೆ ವೆಟ್ ಲ್ಯಾಂಡ್ಸ್ ನೀಡಬೇಕೆಂದು ಕೆರೆ ಸುತ್ತಮುತ್ತಲಿನ ರೈತರು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದರು.
ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದೆಂದು ಎನ್ಜಿಟಿ ಅಧಿಕಾರಿಗಳು ರೈತರಿಗೆ ತಿಳಿಸಿದರು.