ಕರ್ನಾಟಕ

karnataka

ETV Bharat / city

ಚಿನ್ನಸ್ವಾಮಿ‌ ಕ್ರೀಡಾಂಗಣ ಸಮೀಪ ಸ್ಫೋಟ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ - ಚಿನ್ನಸ್ವಾಮಿ‌ ಕ್ರೀಡಾಂಗಣ ಸ್ಫೋಟದಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪದಲ್ಲಿ ಸ್ಫೋಟ ಪ್ರಕರಣಕ್ಕೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಬೆಂಗಳೂರಿನ ವಿಶೇಷ ಕೋರ್ಟ್ ನ್ಯಾಯಮೂರ್ತಿ ಕಸನಪ್ಪ ನಾಯ್ಕ್ ಈ ಕುರಿತ ಮಹತ್ವದ ತೀರ್ಪು ಪ್ರಕಟಿಸಿದರು.

chinnaswamy stadium blast case
chinnaswamy stadium blast case

By

Published : Nov 25, 2021, 9:49 PM IST

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡಿದ್ದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರಿನ ವಿಶೇಷ ಕೋರ್ಟ್ ನ್ಯಾಯಮೂರ್ತಿ ಕಸನಪ್ಪ ನಾಯ್ಕ್ ಅವರು ಇಂದು ತೀರ್ಪು ಪ್ರಕಟಿಸಿದರು. ಗಯೂರ್ ಅಹ್ಮದ್ ಜಮಾಲಿ, ಅಫ್ತಾಬ್ ಆಲಂಗೆ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಗಳು. ಈ ಹಿಂದೆ ಅಪರಾಧಿಗಳಿಗೆ 8 ವರ್ಷ ಜೈಲು, 4 ಲಕ್ಷ ರೂ. ದಂಡ ವಿಧಿಸಿತ್ತು. ಹೈಕೋರ್ಟ್ ಶಿಕ್ಷೆ ಮರುಪರಿಶೀಲನೆಗೆ ಸೂಚಿಸಿತ್ತು. ಹೀಗಾಗಿ, ವಿಶೇಷ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ ಅಭಿಯೋಜಕರಾಗಿ ರವೀಂದ್ರ ವಾದ ಮಂಡಿಸಿದ್ದರು.

2010ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪದಲ್ಲಿ ಐಪಿಎಲ್ ಪಂದ್ಯಾವಳಿಗೂ ಮೊದಲು ನಡೆದ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಫಾಶಿ ಮೊಹಮ್ಮದ್ ಎಂಬ ಆರೋಪಿಗೆ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಬಿಹಾರ ಮೂಲದ ಫಾಶಿಗೆ ಇಂಜಿನಿಯರಿಂಗ್ ಓದುತ್ತಿದ್ದಾಗ ಯಾಸೀನ್ ಭಟ್ಕಳ್ ಪರಿಚಯವಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪದಲ್ಲಿ ನಡೆದಿದ್ದ ಬಾಂಬ್ ಸ್ಫೋಟದಲ್ಲಿ ಯಾಸೀನ್ ಭಟ್ಕಳ್​ಗೆ ಫಾಶಿ ಮೊಹಮ್ಮದ್ ಸಹಕರಿಸಿದ್ದ.

ಇತರೆ ಆರೋಪಿಗಳಾದ ಅಹಮದ್ ಜಮಾಲ್, ಅಫ್ತಾಬ್ ಆಲಂ ಅಲಿಯಾಸ್ ಫಾರೂಕ್​ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ನ್ಯಾಯಾಲಯ 8 ವರ್ಷ ಜೈಲು ಶಿಕ್ಷೆ ಮತ್ತು 4 ಲಕ್ಷ ರೂ. ದಂಡ ವಿಧಿಸಿತ್ತು. ಆ ಶಿಕ್ಷೆಯನ್ನು ಮರು ಪರಿಶೀಲನೆ ಮಾಡಿದ ವಿಶೇಷ ಕೋರ್ಟ್ ಇದೀಗ ಜೀವಾವಧಿ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್ ಸ್ಫೋಟ ಪ್ರಕರಣ : ತಪ್ಪಿತಸ್ಥರಿಗೆ 8 ವರ್ಷ ಜೈಲು, 4 ಲಕ್ಷ ದಂಡ

For All Latest Updates

ABOUT THE AUTHOR

...view details