ಬೆಂಗಳೂರು:ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸ ರದ್ದಾಗಿದೆ. ಇಂದು ಸಂಜೆ 4 ಗಂಟೆಗೆ ಸಿಎಂ ಚಿತ್ರದುರ್ಗ ಜಿಲ್ಲೆ ಪ್ರವಾಸಕ್ಕೆ ತೆರಳಬೇಕಾಗಿತ್ತು. ಆದರೆ ಹವಾಮಾನ ವೈಪರೀತ್ಯ ಕಾರಣಕ್ಕೆ ಚಿತ್ರದುರ್ಗದಲ್ಲಿನ ಎಲ್ಲಾ ಕಾರ್ಯಕ್ರಮ ರದ್ದುಪಡಿಸಿದರು.
ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತೆರಳಬೇಕಾಗಿತ್ತು. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ ನಡೆಸಿ, ಬಳಿಕ ಸಾಣೆಹಳ್ಳಿಯಲ್ಲಿ ಗೋ ಪೂಜೆ ನೆರವೇರಿಸಲಿದ್ದರು.