ಬೆಂಗಳೂರು:ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯಿದೆ ಎಲ್ಲಾ ಧರ್ಮೀಯರೂ, ತಮ್ಮ ತಮ್ಮ ಧರ್ಮವನ್ನು ಶಾಂತಿ ಹಾಗೂ ಸಹಬಾಳ್ವೆಯಿಂದ ಆಚರಿಸಲು ಪೂರಕವಾಗಿರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra) ತಿಳಿಸಿದ್ದಾರೆ.
ಬೆಂಗಳೂರಿನ ಗೃಹಕಚೇರಿಯಲ್ಲಿ ಕ್ರೈಸ್ತ ಸಮುದಾಯದ ಮುಖಂಡರು ಗೃಹ ಸಚಿವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರ ತರಲುದ್ದೇಶಿಸಿರುವ ಮತಾಂತರ ನಿಷೇಧ ಕಾಯಿದೆಯ ಬಗ್ಗೆ ಚರ್ಚಿಸಿದರು. ಕ್ರೈಸ್ತ ಧರ್ಮ ಪ್ರಚಾರಕ್ಕೆ ತೊಡಕುಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.