ಬೆಂಗಳೂರು: 545 ಪಿಎಸ್ಐ ಆಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಪಿಎಸ್ಐ ಅಭ್ಯರ್ಥಿಗಳಿಗೆ ನೋಟಿಸ್ ನೀಡಿತ್ತು. ನೋಟಿಸ್ ನೀಡಿದ್ದ 50 ಅಭ್ಯರ್ಥಿಗಳ ಪೈಕಿ 45 ಮಂದಿ ಮಾತ್ರ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೇವಲ ಕಲಬುರಗಿ ಅಷ್ಟೇ ಅಲ್ಲದೇ ರಾಜ್ಯದ ಹಲವು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ. 545 ಅಭ್ಯರ್ಥಿಗಳ ಪೈಕಿ ಟಾಪರ್ಸ್ ಆಗಿದ್ದ 50 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿ ಮಾಡಿತ್ತು. ಈಗಾಗಲೇ 45 ಅಭ್ಯರ್ಥಿಗಳು ವಿಚಾರಣೆಗೆ ಹಾಜರಾಗಿದ್ದಾರೆ.