ಬೆಂಗಳೂರು; ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ - ima
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ಮನ್ಸೂರ್ ಖಾನ್
10 ದಿನಗಳಿಂದ ಜಾರಿ ನಿರ್ದೆಶನಾಲಯದ ಆಧಿಕಾರಿಗಳು ಮನ್ಸೂರ್ ಅಲಿ ಖಾನ್ನನ್ನು ವಿಚಾರಣೆ ನಡೆಸಿದ್ದರು. ಬೆಂಗಳೂರು ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹ ಸಿಟಿ ಸಿವಿಲ್ ಕೋರ್ಟ್ನಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶಿಸಲಾಗಿದೆ. ಮನ್ಸೂರ್ನನ್ನು ಬಿಗಿ ಪೊಲೀಸ್ ಭದ್ರತೆ ನಡುವೆ ಇಡಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆತಂದರು. ಇಡಿ ಅಧಿಕಾರಿಗಳ ಮುಂದೆ ಕುತೂಹಲಕಾರಿ ಹೇಳಿಕೆ ನೀಡಿರುವ ಹಿನ್ನೆಲೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.