ಕರ್ನಾಟಕ

karnataka

ETV Bharat / city

ಶಿವರಾಮ ಕಾರಂತ್ ಬಡಾವಣೆಯಲ್ಲಿ ಅನಧಿಕೃತ ಕಟ್ಟಡಗಳ ತೆರವು - Clearance of unauthorized buildings in Bangalore news

ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಡ್ರೋನ್ ಕ್ಯಾಮರಾದಿಂದ ಸೆರೆ ಹಿಡಿದ ಛಾಯಾಚಿತ್ರಗಳನ್ನು ಪರಿಶೀಲಿಸಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಕಟ್ಟಿರುವ ಮತ್ತು ಕಟ್ಟುತ್ತಿರುವ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗಿದೆ.

ಶಿವರಾಮ ಕಾರಂತ್ ಬಡಾವಣೆಯಲ್ಲಿ ಅನಧಿಕೃತ ಕಟ್ಟಡಗಳ ತೆರವು
ಶಿವರಾಮ ಕಾರಂತ್ ಬಡಾವಣೆಯಲ್ಲಿ ಅನಧಿಕೃತ ಕಟ್ಟಡಗಳ ತೆರವು

By

Published : Oct 25, 2021, 10:26 PM IST

ಬೆಂಗಳೂರು: ಬಿಡಿಎ ಅಭಿವೃದ್ಧಿ ಪಡಿಸುತ್ತಿರುವ ಡಾ.ಶಿವರಾಮ ಕಾರಂತ ಬಡಾವಣೆ ರಚನೆ ಪ್ರಕ್ರಿಯೆಯಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಲ್ಲಿ 03/08/2018 ರ ನಂತರ ನಿರ್ಮಿಸಲ್ಪಟ್ಟಿರುವ ಅಥವಾ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ‌‌

ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಡ್ರೋನ್ ಕ್ಯಾಮರಾದಿಂದ ಸೆರೆ ಹಿಡಿದ ಛಾಯಾಚಿತ್ರಗಳನ್ನು ಪರಿಶೀಲಿಸಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಕಟ್ಟಿರುವ ಮತ್ತು ಕಟ್ಟುತ್ತಿರುವ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗಿದೆ.

ಸರ್ವೋಚ್ಛ ನ್ಯಾಯಾಲಯ ರಚಿಸಿರುವ ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಅವುಗಳನ್ನು ಹೊರತು ಪಡಿಸಿ 03/08/2018 ರ ನಂತರ ನಿರ್ಮಿಸಲಾಗಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಚರಣೆ ಈಗಾಗಲೇ ನಡೆಯುತ್ತಿದೆ.

ಉದ್ದೇಶಿತ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಅಧಿಸೂಚಿತ ಜಾಗದಲ್ಲಿ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಿ ನಿರ್ಮಾಣವಾಗಿದ್ದ ಒಟ್ಟು ಅನಧಿಕೃತ 4 ಆರ್​ಸಿಸಿ ಕಟ್ಟಡಗಳು ಹಾಗೂ 3 ಎಸಿ ಶೀಟಿನ ಶೆಡ್‍ಗಳನ್ನು ಇಂದು ತೆರವುಗೊಳಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಮಾಹಿತಿ ನೀಡಲಾಗಿದೆ.

For All Latest Updates

TAGGED:

ABOUT THE AUTHOR

...view details