ಬೆಂಗಳೂರು:ನಿನ್ನೆ ಸಿಡಿ ಬಹಿರಂಗಗೊಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದು ರಾಜೀನಾಮೆ ಸಲ್ಲಿಸಿದ್ದರು. ರಮೇಶ್ ಜಾರಕಿಹೊಳಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅಂಗೀಕರಿಸಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ಸಿಎಂ - ಸಿಎಂ ಬಿಎಸ್ವೈ
14:16 March 03
ಸಿಡಿ ಆರೋಪ ಪ್ರಕರಣ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಸಿಎಂ ಯಡಿಯೂರಪ್ಪ ಅಂಗೀಕರಿಸಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಮೂಲಕ ರಾಜೀನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಕೆ ಮಾಡಿದ್ದರು. ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆರೋಪ ನಿರಾಧಾರ ಎಂದು ಸಾಬೀತಾದ ನಂತರ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ರಮೇಶ್ ರಾಜೀನಾಮೆಯನ್ನು ಮುಖ್ಯಮಂತ್ರಿ ಅಂಗೀಕರಿಸಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ.
ಇದನ್ನೂ ಓದಿ:ಸಾಹುಕಾರ್ ಸಿಡಿ ಪ್ರಕರಣ: ಖಾಸಗಿ ವಿಡಿಯೋ ಅಪ್ಲೋಡ್ ಆಗಿದ್ದು ಎಲ್ಲಿ ಗೊತ್ತಾ?