ಕರ್ನಾಟಕ

karnataka

ಹಾಲಿ-ಮಾಜಿ ಸಿಎಂ ಸೇರಿ ಕೈ ನಾಯಕರಿಂದ ಜನತೆಗೆ ಹೊಸ ವರ್ಷದ ಶುಭಾಶಯ..

By

Published : Jan 1, 2020, 2:07 PM IST

ನಾಡಿನ ಜನತೆ ಇಂದು ಹೊಸ ವರ್ಷದ ಸಂಭ್ರಮದಲ್ಲಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕಾಂಗ್ರೆಸ್​ ನಾಯಕರು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು ಎಂದಿದ್ದಾರೆ.

Congress leaders
ಕಾಂಗ್ರೆಸ್​ ನಾಯಕರ ಟ್ವೀಟ್​

ಬೆಂಗಳೂರು: ನಾಡಿನ ಜನತೆ ಇಂದು ಹೊಸ ವರ್ಷದ ಸಂಭ್ರಮದಲ್ಲಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕಾಂಗ್ರೆಸ್​ ನಾಯಕರು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ2020ಹೊಸ ವರ್ಷದ ಶುಭಾಶಯಗಳು ಎಂದಿದ್ದಾರೆ.

ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ..

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್​ನಲ್ಲಿ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2020 ಸುಖ, ಶಾಂತಿ, ಸಮೃದ್ಧಿ ತರಲೆಂದು ಆಶಿಸುತ್ತೇವೆ ಎಂದು ತಿಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್​ನಲ್ಲಿ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ‌ ಶುಭಾಶಯಗಳು. ತಮ್ಮೆಲ್ಲರ ಕಷ್ಟದ ದಿನಗಳು ಕಳೆದು ಸುಖ, ಶಾಂತಿ, ಸಮೃದ್ಧಿಯ ಬದುಕು ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್​ ನಾಯಕರ ಟ್ವೀಟ್​

ಮಾಜಿ ಸಚಿವ ಯು ಟಿ ಖಾದರ್, ಮಾಜಿ ಸಚಿವ ಡಿ ಕೆ ಶಿವಕುಮಾರ್ ಸಹ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನಾವು 2020ರಲ್ಲಿ ನ್ಯಾಯಯುತ, ನ್ಯಾಯ ಸಮ್ಮತ ಮತ್ತು ಶಾಂತಿಯುತ ಭಾರತವನ್ನು ನಿರ್ಮಿಸಲು ಪ್ರಯತ್ನಿಸುತ್ತೇವೆ ಎಂದು ನಾವು ಪ್ರತಿಜ್ಞೆ ಮಾಡಬೇಕು. ನಾವೆಲ್ಲರೂ ಮಾಡಲು ಸಾಕಷ್ಟು ಕೆಲಸಗಳಿವೆ ಎಂದಿದ್ದಾರೆ.

ಸಿಎಂ ಬಿಎಸ್‌ವೈ, ಮಾಜಿ ಸಚಿವರಾದ ಡಿ ಕೆ ಶಿವಕುಮಾರ್, ಪ್ರಿಯಾಂಕ ಖರ್ಗೆ ಟ್ವೀಟ್..​

ಮಾಜಿ ಸಚಿವರುಗಳಾಗ ಕೆ ಜೆ ಜಾರ್ಜ್, ರಾಮಲಿಂಗರೆಡ್ಡಿ ಸಹ ಸರ್ವರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ. ಮಾಜಿ ಸಚಿವ ಪ್ರಿಯಾಂಕ ಖರ್ಗೆ ತಮ್ಮ ಟ್ವೀಟ್​ನಲ್ಲಿ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು. ಕಳೆದ ವರ್ಷ ಭಾರತದ ಯುವಕರಲ್ಲಿ ಬದಲಾವಣೆಯ ಕಿಡಿ ಹೊತ್ತಿತ್ತು. ಅದು ನೈಜ ಭಾರತದ ಕಲ್ಪನೆಯನ್ನು ರಕ್ಷಿಸುವ ಕಿಡಿ. ವ್ಯವಸ್ಥಿತ ಬದಲಾವಣೆಯೊಂದನ್ನು ತರುವ ಉದ್ದೇಶದಿಂದ ಹೊತ್ತಿರುವ ಆ ಕಿಡಿ, ಈ ವರ್ಷ ಇನ್ನೂ ವಿಸ್ತಾರವಾಗಿ ಹರಡಿ ಭಾರತಕ್ಕೆ ಹೊಸ ಆರಂಭ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details