ಬೆಂಗಳೂರು:ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪೊಲೀಸರು ಈ ಪ್ರಕರಣದಲ್ಲಿ ಆದಷ್ಟು ಬೇಗ ಅಪರಾಧಿಗಳನ್ನು ಬಂಧಿಸ್ತಾರೆ. ಎರಡು ದಿನಗಳ ಹಿಂದೆ ಆರೋಪಿಗಳನ್ನು ಶೀಘ್ರ ಹಿಡಿಯಲು ಸೂಚಿಸಿದ್ದೇನೆ. ಐದು ತಂಡಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.