ಕರ್ನಾಟಕ

karnataka

ETV Bharat / city

ಕೊರೊನಾ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಬೊಮ್ಮಾಯಿ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೊನಾ

CM Basavaraj Bommai tests positive for covid: ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಮಂಗಳವಾರ) ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

CM Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Jan 11, 2022, 11:51 AM IST

ಬೆಂಗಳೂರು:ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈದ್ಯರ ಸಲಹೆ ಮೇರೆಗೆ ಇಂದು(ಮಂಗಳವಾರ) ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ನಿನ್ನೆ(ಸೋಮವಾರ) ಸಿಎಂಗೆ ಕೋವಿಡ್​​ ಪಾಸಿಟಿವ್ ದೃಢಪಟ್ಟಿದ್ದು, ಇಂದು ಬೊಮ್ಮಾಯಿ ಮಗ ಮತ್ತು ಸೊಸೆಗೂ ಪಾಸಿಟಿವ್ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಸಿಎಂ ತೆರಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಕೋವಿಡ್ ದೃಢ

ಈ ಹಿಂದೆ ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಎರಡೂ ಬಾರಿಯೂ ಅಂದು ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಎರಡೂ ಬಾರಿಯೂ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದಲೇ ಕಡತ ವಿಲೇವಾರಿ, ವರ್ಚುಯಲ್ ಮೀಟಿಂಗ್ ಸೇರಿದಂತೆ ಕರ್ತವ್ಯ ನಿರ್ವಹಣೆ ಮಾಡಿ ಗಮನ ಸೆಳೆದಿದ್ದನ್ನು, ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ:ಚಂಪಾ ಅಂತ್ಯಕ್ರಿಯೆಗೆ ತೆರಳಿದ್ದ ಸಿಎಂ ಬೊಮ್ಮಾಯಿಗೆ ವಕ್ಕರಿಸಿತು ಕೊರೊನಾ!

For All Latest Updates

TAGGED:

ABOUT THE AUTHOR

...view details