ಕರ್ನಾಟಕ

karnataka

ETV Bharat / city

ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ನಿಷೇಧ ಸಮರ್ಥಿಸಿ ಸಿಎಂ ಬೊಮ್ಮಾಯಿ ಸರಣಿ ಟ್ವೀಟ್‌..! - ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ನಿಷೇಧ ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ

ಕೋವಿಡ್ ಮಹಾಮಾರಿ 3ನೇ ಅಲೆ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಮೇಕೆದಾಟು ಪಾದಯಾತ್ರೆ ನಿಷೇಧಿಸಿರುವ ಬಗ್ಗೆ ಸ್ಫಷ್ಟನೆ ನೀಡಿದ್ದಾರೆ.

CM Basavaraj bommai defends the ban of the congress mekedatu padayatra
ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ನಿಷೇಧ ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ

By

Published : Jan 13, 2022, 2:47 AM IST

Updated : Jan 13, 2022, 4:02 AM IST

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ಪಾದಯಾತ್ರೆ ನಿಷೇಧಿಸಿದ ಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿವೆ. ಮೇಕೆದಾಟು ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸರಣಿ ಟ್ವೀಟ್ ಮಾಡಿದ್ದಾರೆ.

ಈಗ ಕೋವಿಡ್ ಮಹಾಮಾರಿ 3ನೇ ಅಲೆಯು ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ ಎಂದು ಟ್ವೀಟ್ ಮೂಲಕ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೆ ಎಲ್ಲರ ಸಹಕಾರವನ್ನು ಬಯಸುತ್ತೇನೆ. ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ:ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಮೊಟಕುಗೊಳಿಸಿ; ಸಿದ್ದರಾಮಯ್ಯ, ಡಿಕೆಶಿಗೆ ಮಾಜಿ ಸಿಎಂ ಎಸ್ಎಂ ಕೃಷ್ಣ ಪತ್ರ

Last Updated : Jan 13, 2022, 4:02 AM IST

For All Latest Updates

TAGGED:

ABOUT THE AUTHOR

...view details