ಬೆಂಗಳೂರು: ತಮ್ಮ ಚೊಚ್ಚಲ ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
2022-23 ನೇ ಸಾಲಿನ ಆರ್ಥಿಕ ವರ್ಷ ಆರಂಭದ ಮೊದಲ ದಿನವಾಗಿರುವ ಏಪ್ರಿಲ್ 1 ರಿಂದಲೇ ಬಜೆಟ್ನಲ್ಲಿ ಘೋಷಿತ ಯೋಜನೆಗಳ ಜಾರಿಗೆ ಸರ್ಕಾರಿ ಆದೇಶಗಳನ್ನು ಹೊರಡಿಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.