ಬೆಂಗಳೂರು: ಮೇಕೆದಾಟು ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ತಮಿಳುನಾಡಿನಲ್ಲಿ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಅವರು ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಲಿದ್ದಾರೆ. ಎಲ್ಲವು ಕ್ಲಿಯರ್ ಆದ ಕೂಡಲೇ ಕಾಮಗಾರಿ ಆರಂಭ ಮಾಡ್ತೇವೆ ಎಂದು ಭರವಸೆ ನೀಡಿದರು.