ಕರ್ನಾಟಕ

karnataka

ETV Bharat / city

ಪೆಟ್ರೋಲ್-ಡೀಸೆಲ್ ಸುಂಕ ಇಳಿಕೆ ಕುರಿತು ಪರಿಶೀಲನೆ: ಸಿಎಂ ಬೊಮ್ಮಾಯಿ

ಕೇಂದ್ರ ಸರ್ಕಾರ ಕಳೆದ ರಾತ್ರಿಯಷ್ಟೇ ತೈಲ ಬೆಲೆ ಇಳಿಕೆ ಮಾಡಿದೆ. ಹಾಗಾಗಿ ರಾಜ್ಯ ಸರ್ಕಾರವೂ ತೈಲದ ಮೇಲಿನ ತೆರಿಕೆ ಇಳಿಕೆ ಮಾಡುವ ಕುರಿತು ಪರಿಶೀಲನೆ ನಡೆಸುತ್ತದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

CM Basavaraj bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : May 22, 2022, 10:27 AM IST

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವೋಸ್ ಪ್ರವಾಸಕ್ಕೆ ತೆರಳುವ ಮುನ್ನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆಯೂ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಕಡಿತಗೊಳಿಸಿದಾಗ ರಾಜ್ಯ ಸರ್ಕಾರ ತೆರಿಗೆ ಕಡಿತಗೊಳಿಸಿತ್ತು. ಹಾಗಾಗಿ ಈ ಬಾರಿಯೂ ತೆರಿಗೆ ಕಡಿತದ ನಿರೀಕ್ಷೆ ಇದೆ.


ದಾವೋಸ್ ಪ್ರವಾಸ:ಇಂದು ಸ್ವಿಟ್ಜರ್ಲೆಂಡ್​​​ನ ದಾವೋಸ್​​​ಗೆ ತೆರಳುತ್ತಿದ್ದು ನಾಳೆ ಮತ್ತು 24ರಂದು ನಡೆಯಲಿರುವ 'ವಿಶ್ವ ಆರ್ಥಿಕ ಶೃಂಗ'ದಲ್ಲಿ ಭಾಗಿಯಾಗುತ್ತೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗುವೆ. ಹೂಡಿಕೆದಾರರನ್ನು ಸೆಳೆಯಲು ಎಲ್ಲ ಪ್ರಯತ್ನ ನಡೆಸಲಾಗುತ್ತದೆ ಎಂದು ಸಿಎಂ ಹೇಳಿದರು.

ಈ ತ್ರೈಮಾಸಿಕದಲ್ಲಿ ಭಾರತಕ್ಕೆ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದುಬಂದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು ಬಂಡವಾಳ ಹರಿದು ಬಂದಿತ್ತು. ಈ ಬಾರಿಯೂ ನಮಗೆ ಹೆಚ್ಚು ಬಂಡವಾಳ ಹರಿದು ಬಂದಿದೆ. ಇನ್ನೂ ಹಲವರು ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್‌ನಲ್ಲಿ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಮಾಡುತ್ತಿದ್ದೇವೆ. ಅದಕ್ಕೆ ದಾವೋಸ್ ಪ್ರವಾಸದಲ್ಲಿ ದೊಡ್ಡ ಸ್ಪಂದನೆ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದರು.

ನಮಗೆ ದಾವೋಸ್ ಪ್ರವಾಸಕ್ಕೆ ತೆರಳಲು ಅತಿಹೆಚ್ಚಿನ ಉತ್ಸಾಹ ಇದೆ. ಕೇವಲ ನಾವು ಒಡಂಬಡಿಕೆ ಮಾಡಿಕೊಳ್ಳುವುದಿಲ್ಲ, ಕೈಗಾರಿಕೆ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಲಿದ್ದೇವೆ. ನಮ್ಮ ಜೊತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತು ಐಟಿಬಿಟಿ ಸಚಿವ ಡಾ.ಅಶ್ವತ್ಥ್​​ ನಾರಾಯಣ ದಾವೋಸ್​​ಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ನಾಳೆ ದಾವೋಸ್​ಗೆ ತೆರಳಿ ಮೇ 26ಕ್ಕೆ ವಾಪಸ್ ಬರಲಿದ್ದೇನೆ: ಸಿಎಂ

For All Latest Updates

ABOUT THE AUTHOR

...view details