ಕರ್ನಾಟಕ

karnataka

ETV Bharat / city

ಆರ್.ಎಲ್.ಜಾಲಪ್ಪ ವ್ಯಕ್ತಿತ್ವ ವಿಭಿನ್ನವಾಗಿತ್ತು: ಸಿಎಂ ಬೊಮ್ಮಾಯಿ ಬಣ್ಣನೆ - Senior Congress leader RL Jalappa

ಆರ್.ಎಲ್. ಜಾಲಪ್ಪನವರು ಹಿಂದುಳಿದ ವರ್ಗದ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಅವರ ವ್ಯಕ್ತಿತ್ವ ವಿಭಿನ್ನವಾಗಿತ್ತು. ಬಹಳ ನೇರ, ನಿಷ್ಠುರ ವ್ಯಕ್ತಿ. ಸಹಕಾರ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು..

CM Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Dec 20, 2021, 1:31 PM IST

ಬೆಂಗಳೂರು : ಅನಾರೋಗ್ಯದಿಂದ ನಿಧನರಾದ ಕೇಂದ್ರದ ಮಾಜಿಸಚಿವ, ಕಾಂಗ್ರೆಸ್​​ನ ಹಿರಿಯ ಮುಖಂಡ ಆರ್.‌ಎಲ್ ಜಾಲಪ್ಪ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ಕೇಂದ್ರದ ಮಾಜಿ ಸಚಿವ ಆರ್.‌ಎಲ್ ಜಾಲಪ್ಪ ಅವರಿಗೆ ವಿಧಾನ ಸಭೆಯಲ್ಲಿ ಸಂತಾಪ..

ಸದನ ಆರಂಭವಾಗುತ್ತಿದ್ದಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಸಂತಾಪ ಸೂಚನೆ ನಿರ್ಣಯವನ್ನು ಮಂಡಿಸಿದರು. ಸಂತಾಪ ಸೂಚನೆ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆರ್.ಎಲ್. ಜಾಲಪ್ಪನವರು ಹಿಂದುಳಿದ ವರ್ಗದ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಜಾಲಪ್ಪ ಅವರ ವ್ಯಕ್ತಿತ್ವ ವಿಭಿನ್ನವಾಗಿತ್ತು. ಬಹಳ ನೇರ, ನಿಷ್ಠುರ ವ್ಯಕ್ತಿ. ಸಹಕಾರ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ಜಾಲಪ್ಪ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾಗ ಉತ್ತಮ ಸೇವೆ ಮಾಡಿದ್ದರು. ರಾಜಕಾರಣದಲ್ಲಿ ತಮ್ಮದೇ ನಿಲುವಿತ್ತು. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಆರೋಗ್ಯ ವಿಚಾರದಲ್ಲಿ ಹೆಚ್ಚು ಒತ್ತು ನೀಡಿದ್ದಾರೆ ಎಂದು ಹೇಳಿದರು. ಜಾಲಪ್ಪನವರು ತುಂಬಾ ಸ್ವಾಭಿಮಾನಿ. ಬಹಳಷ್ಟು ಹಿಂದುಳಿದ ನಾಯಕರಿಗೆ ಮಾರ್ಗದರ್ಶಕರಾಗಿದ್ದರು. ನಮ್ಮ ತಂದೆಯವರ ಜತೆ ಹೆಚ್ಚು ಒಡನಾಟ ಇತ್ತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆಯೂ ಹೆಚ್ಚು ಒಡನಾಟ ಇಟ್ಟುಕೊಂಡಿದ್ದರು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸಂತಾಪ ನಿರ್ಣಯದ ವೇಳೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಮಾಜಿ ಸಚಿವ ಡಾ.ಜಿ. ಪರಮೇಶ್ವರ್, ಶಾಸಕರಾದ ಕುಮಾರ ಬಂಗಾಪ್ಪ, ಶಿವಲಿಂಗೇಗೌಡ ಮತ್ತಿತರರು ಮಾತನಾಡಿದರು.

ಇದನ್ನೂ ಓದಿ:ನಕಲಿ ನಂದಿನಿ ತುಪ್ಪ ತಯಾರಕರ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ : ಎಸ್.ಟಿ. ಸೋಮಶೇಖರ್

ABOUT THE AUTHOR

...view details