ಕರ್ನಾಟಕ

karnataka

ETV Bharat / city

ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಖರೀದಿಗೆ ಅನುಮತಿ: ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ ಸಿಎಂ

ಗರಿಷ್ಠ 30 ಸಾವಿರ ಮೆಟ್ರಿಕ್ ಟನ್ ಹೆಸರು ಹಾಗೂ 10 ಸಾವಿರ ಮೆಟ್ರಿಕ್ ಟನ್ ಉದ್ದು ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಸರ್ಕಾರ ನಿಗದಿ ಪಡಿಸುವ ದಿನಾಂಕದಿಂದ 90 ದಿನಗಳ ಅವಧಿಗೆ ಈ ಖರೀದಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

cm
cm

By

Published : Aug 25, 2021, 11:47 PM IST

ಬೆಂಗಳೂರು:ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದು, ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

'ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸಂತಸ ತಂದಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಕೃಷಿ ಸಚಿವ ತೋಮರ್ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

"ಗರಿಷ್ಠ 30 ಸಾವಿರ ಮೆಟ್ರಿಕ್ ಟನ್ ಹೆಸರು ಹಾಗೂ 10 ಸಾವಿರ ಮೆಟ್ರಿಕ್ ಟನ್ ಉದ್ದು ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಸರ್ಕಾರ ನಿಗದಿ ಪಡಿಸುವ ದಿನಾಂಕದಿಂದ 90 ದಿನಗಳ ಅವಧಿಗೆ ಈ ಖರೀದಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details