ಕರ್ನಾಟಕ

karnataka

ETV Bharat / city

ಅಪ್ಪು'ಗಂಧದಗುಡಿ'ಗೆ ಸಿಎಂ ಬೊಮ್ಮಾಯಿ ಮೆಚ್ಚುಗೆ.. - ಗಂಧದಗುಡಿ ವೈಲ್ಡ್ ಡಾಕ್ಯುಮೆಂಟರಿ

ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ..

gandhada-gudi
ಗಂಧದಗುಡಿ ಟೀಸರ್

By

Published : Dec 6, 2021, 12:13 PM IST

ಬೆಂಗಳೂರು : ಬಹುನಿರೀಕ್ಷಿತ ನಟ ಪುನೀತ್ ರಾಜಕುಮಾರ್ ಕನಸಿನ ಗಂಧದಗುಡಿ ವೈಲ್ಡ್ ಡಾಕ್ಯುಮೆಂಟರಿ ಟೀಸರ್​​ ಅನ್ನು ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ. ಗಂಧದಗುಡಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಮ್ಮೆಲ್ಲರ ಪ್ರೀತಿಯ ಅಪ್ಪು, ಪುನೀತ್ ರಾಜಕುಮಾರ್ ಅಭಿನಯದ ಪಿಆರ್‌ಕೆ ಪ್ರೊಡಕ್ಷನ್ ನಿರ್ಮಿಸಿರುವ 'ಗಂಧದ ಗುಡಿ' ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು.

ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details