ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖ ಸಚಿವರ ಸಭೆ ಕರೆದಿದ್ದು, ಮಹತ್ವದ ಚರ್ಚೆ ನಡೆಸುತ್ತಿದ್ದಾರೆ. ಪಾದಯಾತ್ರೆನಿರತರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದಾರೆ.
ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಕಾಟೇಜ್ನಲ್ಲಿ ಸಚಿವರು ಮತ್ತು ಪಕ್ಷದ ಪ್ರಮುಖರ ಜೊತೆ ಸಿಎಂ ಸಭೆ ನಡೆಸುತ್ತಿದ್ದಾರೆ. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವರಾದ ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಪ್ರಮುಖ ಸಚಿವರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನ ಅಭಿವೃದ್ಧಿ ಬಗೆಗಿನ ಚರ್ಚೆ ನೆಪದಲ್ಲಿ ಮೇಕೆದಾಟು ಯೋಜನೆ, ಪಾದಯಾತ್ರೆ ಬಗ್ಗೆ ಚರ್ಚೆ ಆಗುತ್ತಿದೆ. ಪಾದಯಾತ್ರೆ ಆರಂಭಗೊಂಡಿದ್ದು, ಈಗ ತಡೆಯುವುದು ಹೇಗೆ? ಬೆಂಗಳೂರು ಪ್ರವೇಶಕ್ಕೆ ಅವಕಾಶ ನೀಡಬೇಕಾ? ಎನ್ನುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ.