ಬೆಂಗಳೂರು:ಪ್ರಜಾಪ್ರಭುತ್ವದಲ್ಲಿ ಧರಣಿ ಮಾಡಲು ಎಲ್ಲರಿಗೂ ಹಕ್ಕಿದೆ. ಆದರೆ, ಭ್ರಷ್ಟಾಚಾರದ ಆರೋಪ ಮಾಡಿ ಧರಣಿ ಮಾಡುವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಜಕ್ಕೂರು ಬಡಾವಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಪ್ರಕರಣಗಳಲ್ಲಿ ಅವರ ಸರ್ಕಾರದಲ್ಲಿ ಅವರು ನಡೆದುಕೊಂಡ ರೀತಿಯನ್ನು ಅತ್ಮಾವಲೋಕನ ಮಾಡಿಕೊಳ್ಳಲಿ. ಜನರಿಗೆ ಎಲ್ಲವೂ ಗೊತ್ತಿದೆ. ಬೇರೆ ಬೇರೆ ಸಂದರ್ಭದಲ್ಲಿ ಅವರು ಏನು ಮಾಡಿದ್ದಾರೆ ಎನ್ನುವುದೂ ಗೊತ್ತಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಲಾಭ ಪಡೆದುಕೊಳ್ಳಲು ಹೊರಟಿದ್ದಾರೆ ಎಂದು ಟೀಕಿಸಿದರು.