ದೇವನಹಳ್ಳಿ (ಬೆಂಗಳೂರು):ಅಭಿವೃದ್ಧಿ ದೃಷ್ಟಿಯಿಂದ ದೆಹಲಿ ಯಾತ್ರೆ ಫಲಪ್ರದವಾಗಿದೆ. ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದು, ವಿವಾದಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಎಲ್ಲದಕ್ಕೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣ, ಚುನಾವಣೆ ಸಂಬಂಧ ಚರ್ಚೆ ನಡೆಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ದೆಹಲಿ ಯಾತ್ರೆ ಫಲಪ್ರದ: ಸಿಎಂ ಬೊಮ್ಮಾಯಿ
ದೆಹಲಿಯಿಂದ ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಎಂ ಬೊಮ್ಮಾಯಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇದನ್ನೂ ಓದಿ:ಹಿರಿಯರಿಗೆ ಕೊಕ್ ಕೊಟ್ಟರೂ ಓಕೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿದ್ರು ಸಂತೋಷ: ಉಮೇಶ್ ಕತ್ತಿ
ಜೆ.ಪಿ ನಡ್ಡಾ ಅವರು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ರಾಜ್ಯಕ್ಕೆ ಬರಲಿದ್ದಾರೆ. ಸಚಿವ ಸಂಪುಟದ ಬಗ್ಗೆ ವಿವರವಾದ ಚರ್ಚೆಯಾಗಿದೆ. ಈ ಬಗ್ಗೆ ವರಿಷ್ಠರ ಜೊತೆ ಮಾತನಾಡಿ ಸಮಯ ಕೊಡುತ್ತೇನೆಂದು ಅವರು ಭರವಸೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.