ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಇಂದು ಬೆಳಗ್ಗೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮೂಲಕ ದೇವರ ದರ್ಶನ ಪಡೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಗಂಗಾ ಹಾಗೂ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದರು. ಈ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಅವರಿಗೂ ಆಹ್ವಾನ ನೀಡಲಾಗಿದೆ.