ಕರ್ನಾಟಕ

karnataka

ETV Bharat / city

ಮೇ 21ರಂದು ದಾವೋಸ್​ಗೆ ತೆರಳಲಿರುವ ಸಿಎಂ ಬೊಮ್ಮಾಯಿ: ಮೇ 26ಗೆ ವಾಪಸ್ - World Economic Forum

ದಾವೋಸ್​ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 21 ರಂದು ದಾವೋಸ್​ಗೆ ತೆರಳಲಿದ್ದಾರೆ.

CM Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : May 14, 2022, 1:22 PM IST

ಬೆಂಗಳೂರು:ಮೇ 21 ರಂದು ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವೋಸ್​ಗೆ ತೆರಳಲು ನಿರ್ಧರಿಸಿದ್ದಾರೆ. ಮೇ 21ಕ್ಕೆ ತೆರಳಿ, ಮೇ 26ರ ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ದಾವೋಸ್​​ಗೆ ತೆರಳಿ ವಿಶ್ವ ಆರ್ಥಿಕ ಶೃಂಗದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಶೃಂಗಕ್ಕೆ ಕರ್ನಾಟಕ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದೆ.

ಈ ಮುಂಚೆ ದಾವೋಸ್​ಗೆ ತೆರಳುವ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿ ಗೊಂದಲದಲ್ಲಿ ಇದ್ದರು. ಕಳೆದ ಎರಡು ಮೂರು ದಿನಗಳಿಂದ ದೆಹಲಿಯಿಂದ ಪೊಲಿಟಿಕಲ್ ಕ್ಲಿಯರೆನ್ಸ್​ಗಾಗಿ ಸಿಎಂ ಕಾಯುತ್ತಿದ್ದರು. ಇದೀಗ ದಾವೋಸ್ ಪ್ರವಾಸ ಕೈಗೊಳ್ಳಲು ಅವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ:ರಾಜಕಾರಣದಲ್ಲಿ ದಿನಗಣನೆ ಮಾಡಲು ಆಗುವುದಿಲ್ಲ: ಸಿಎಂ ಬೊಮ್ಮಾಯಿ

ABOUT THE AUTHOR

...view details