ಕರ್ನಾಟಕ

karnataka

ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಘ, ವಿಶೇಷ ಯೋಜನೆ: ಸಿಎಂ ಘೋಷಣೆ

ಮಹಿಳಾ ಉದ್ಯಮಿಗಳಿಗೆ (women entrepreneurs) ಪ್ರತ್ಯೇಕ‌ ಆರ್ಥಿಕ ಸಂಘ ತೆರೆಯಲಾಗುವುದು. ಹಳ್ಳಿಗಳಲ್ಲಿರುವ ಮಹಿಳಾ ಸ್ವಸಹಾಯ ಸಂಘಗಳ ಮಾದರಿಯಲ್ಲಿ ಹೊಸ ಸಂಘ ತೆರೆಯಲಾಗುವುದು ಎಂದು ಸಿಎಂ ತಿಳಿಸಿದರು.

By

Published : Nov 18, 2021, 4:19 PM IST

Published : Nov 18, 2021, 4:19 PM IST

TOGETHER WE GROW
TOGETHER WE GROW

ಬೆಂಗಳೂರು: ಮಹಿಳಾ ಉದ್ಯಮಿಗಳಿಗೆ (women entrepreneurs) ಪ್ರತ್ಯೇಕ ಸಂಘ ತೆರೆಯಲಾಗುವುದು. ದೃಷ್ಟಿ ಚೇತನ ಮತ್ತು ವಿಶೇಷಚೇತನ ಮಹಿಳೆಯರಿಗೆ ಉದ್ಯೋಗ ಕೊಡಲು ವಿಶೇಷ ಯೋಜನೆ ರೂಪಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.‌

ಉಬುಂಟು ಒಕ್ಕೂಟ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ವತಿಯಿಂದ ಖಾಸಗಿ ಹೋಟೆಲ್​ನಲ್ಲಿ ಆಯೋಜಿಸಿದ್ದ 'ಒಟ್ಟಾಗಿ ಬೆಳೆಯೋಣ (TOGETHER WE GROW) ಮತ್ತು ಅಂತಾರಾಷ್ಟ್ರೀಯ ಮಹಿಳಾ ಉದ್ದಿಮೆಗಳ ದಿನಾಚರಣೆಯನ್ನು ಉದ್ಘಾಟಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮಾಜಿ ನಿವೃತ್ತ ಐಎಎಸ್ ಅಧಿಕಾರಿ ಕೆ ರತ್ನಪ್ರಭಾ ಸೇರಿದಂತೆ ಮಹಿಳಾ ಉದ್ಯಮಿಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಸಿಎಂ
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕ ಎಲ್ಲರಿಗೂ ಅವಕಾಶ ಸೃಷ್ಟಿಸುವ ನಾಡು. ಕರ್ನಾಟಕದಲ್ಲಿ ಬಹಳಷ್ಟು ನೈಸರ್ಗಿಕ ಸಂಪತ್ತು ಇದೆ. 7 ದೊಡ್ಡ ನದಿ, ಹಲವು ಸಣ್ಣ ನದಿಗಳು ಇವೆ. ಹಚ್ಚ ಹಸಿರಿನ ಅರಣ್ಯ ಇದೆ. ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಇದನ್ನು ಹೆಚ್ಚಳ ಮಾಡಲು ಮಹಿಳೆಯರು ಮುಂದೆ ಬರಬೇಕಿದೆ. ಪ್ರಮುಖ ವಾಣಿಜ್ಯ ಚಟುವಟಿಕೆಗಳಲ್ಲಿ ಮಹಿಳೆಯರು ಕೆಲಸ ಮಾಡಬೇಕು. ಇದಕ್ಕೆ ಬೇಕಾದ ಹಣಕಾಸಿನ ಸಹಾಯ, ಮಾರುಕಟ್ಟೆ ಒದಗಿಸಲು ಸರ್ಕಾರ ನೆರವು ನೀಡಲಿದೆ ಎಂದರು.
ಮಹಿಳಾ ಉದ್ಯಮಿಗಳಿಗೆ ಸರ್ಕಾರ ಪ್ರೋತ್ಸಾಹ ಧನ ಕೊಡಲಿದೆ. ಮಹಿಳಾ ಉದ್ಯಮಿಗಳಿಗೆ ಜಾಗ ಕೊಳ್ಳಲು ಸರ್ಕಾರ ನೆರವು ನೀಡಲು ಚಿಂತಿಸುತ್ತಿದೆ. ಮಹಿಳೆಯರು ಉದ್ದಿಮೆದಾರರಾಗಬೇಕು, ಅದಕ್ಕಾಗಿಯೇ ಸರ್ಕಾರ ವುಮೆನ್ ಎಂಟರ್ ಪ್ರೆನ್ಯೂರ್ ಶಿಪ್ ಎಂದು ಮಾಡಿದೆ. ಉದ್ದಿಮೆದಾರರು ಎಂದರೆ ಮಹಿಳೆ ಎನ್ನುವಂತಾಗಬೇಕು ಎಂದು ಸಿಎಂ ಪ್ರೋತ್ಸಾಹದ ಮಾತುಗಳನ್ನಾಡಿದರು.
ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಘ, ವಿಶೇಷ ಯೋಜನೆ: ಸಿಎಂ ಘೋಷಣೆ

ಪ್ರತ್ಯೇಕ ಆರ್ಥಿಕ ಸಂಘ:

ಪ್ರಮುಖವಾಗಿ, ಮಹಿಳಾ ಉದ್ಯಮಿಗಳಿಗೆ (women entrepreneurs) ಪ್ರತ್ಯೇಕ‌ ಆರ್ಥಿಕ ಸಂಘ ತೆರೆಯಲಾಗುವುದು. ಹಳ್ಳಿಗಳಲ್ಲಿರುವ ಮಹಿಳಾ ಸ್ವಸಹಾಯ ಸಂಘಗಳ ಮಾದರಿಯಲ್ಲಿ ಹೊಸ ಸಂಘ ತೆರೆಯಲಾಗುವುದು. ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ಈ ಸಂಘಗಳಿಗೆ ನೆರವು ಕೊಡಲಾಗುವುದು.‌ ಈ‌ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಕೊಡುತ್ತೇವೆ. ಎಲ್ಲಾ ಮಹಿಳಾ ಉದ್ದಿಮೆದಾರರಿಗೆ ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ಉಬುಂಟು ಸಮಾವೇಶದ ನೇತೃತ್ವ ವಹಿಸಿರುವ ರತ್ನಪ್ರಭಾ ಮಾದರಿಯಾಗಿದ್ದಾರೆ ಎಂದು ಮಖ್ಯಮಂತ್ರಿ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಿಎಂ
ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಗುಡಿ ಕೈಗಾರಿಕೆಯಿಂದ ಮೆಗಾ ಪ್ರಾಜೆಕ್ಟ್​ವರೆಗೂ ಮಹಿಳೆಯರು ಮಂಚೂಣಿಯಲ್ಲಿರಬೇಕು. ಮಹಿಳೆಯರ ಉದ್ಯಮಶೀಲತಾ ಚಟುವಟಿಕೆಗಳಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಕಳೆದ ಬಾರಿ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಮೀಟ್​​ನಿಂದ 10.08 ಲಕ್ಷ ಜನರಿಗೆ ಉದ್ಯೋಗ ದಕ್ಕಿದೆ. ಅದನ್ನು ಮೀರಿಸಿ ಹೆಚ್ಚಿನ ಜನರಿಗೆ ಉದ್ಯೋಗ ನೀಡುವ ಗ್ಲೋಬಲ್ ಮೀಟ್ ಮಾಡುವ ಗುರಿ ಹೊಂದಿದ್ದೇವೆ ಎಂದರು.
ಕೃಷಿ ಭೂಮಿಯನ್ನು ಕೈಗಾರಿಕಾ ಭೂಮಿಯನ್ನಾಗಿ ಪರಿವರ್ತಿಸಿ, ನಿರುದ್ಯೋಗಿಗಳಿಗೆ ಉದ್ಯೋಗ ಕೊಡಲು ಸಂಪೂರ್ಣ ಸಹಕಾರ ನೀಡಲಾಗುತ್ತಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಆರ್ ಎನ್ ಡಿ ಕಂಪನಿಗಳಿರುವುದು ಬೆಂಗಳೂರಿನಲ್ಲಿ. ಹಾಗೆಯೇ ಅತಿ ಹೆಚ್ಚು ಐಟಿ ಕಂಪನಿಗಳಿವೆ. ಅತಿ ಹೆಚ್ಚು ಇಂಜಿನಿಯರ್​​ಗಳು ಸೃಷ್ಟಿಯಾಗುತ್ತಿದ್ದಾರೆ. ರಾಜ್ಯವೂ ಅತಿ ದೊಡ್ಡ ಕೈಗಾರಿಕಾ ಕ್ಷೇತ್ರಕ್ಕೆ ಅವಕಾಶ ನೀಡುತ್ತಿದೆ. ಎಲ್ಲಿ ಶಿಕ್ಷಣ ಮತ್ತು ಕೈಗಾರಿಕೆ ಇರುತ್ತದೆಯೋ ಆ ರಾಜ್ಯ ಮಂಚೂಣಿಯಲ್ಲಿರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

ಪರಿಷತ್ ಚುನಾವಣೆ ಪೂರ್ವತಯಾರಿಗೆ ಬಿಜೆಪಿ ಜನಸ್ವರಾಜ್ ಯಾತ್ರೆಗೆ ಚಾಲನೆ:
ಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ ಜನಸ್ವರಾಜ್ ಯಾತ್ರೆಗೆ (BJP Jana swaraj) ಇಂದು ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಜೆಪಿಯ ಜನ ಸ್ವರಾಜ್ ಕಾರ್ಯಕ್ರಮಕ್ಕಾಗಿ ಕೊಪ್ಪಳ ಪ್ರವಾಸವನ್ನು ಇಂದು ಕೈಗೊಳ್ಳುತ್ತಿದ್ದೇನೆ. ಪಕ್ಷದ ಹಿರಿಯ ನಾಯಕರು ಬಿ.ಎಸ್.ವೈ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾಲ್ಕು ತಂಡಗಳು ರಾಜ್ಯಾದ್ಯಂತ ಪ್ರವಾಸ ಮಾಡಲಿವೆ. ಅಲ್ಲಿನ ಚುನಾಯಿತ ಪ್ರತಿನಿಧಿಗಳನ್ನು ಭೇಟಿ ಮಾಡಿ ಮುಂಬರುವ ವಿಧಾನ ಪರಿಷತ್ತಿನ ಚುನಾವಣೆಗೆ ಮತದಾರರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚಿಸಲಾಗುವುದು. ನ.22 ನೇ ತಾರೀಖಿನಂದು ಮಡಿಕೇರಿಯಲ್ಲಿ ಈ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.

ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಪ್ರತಿಕ್ರಿಯಿಸಿ, ಈಗಾಗಲೇ 2 ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳಿಸಲಾಗಿದೆ. ಇಂದು ಸಂಜೆ ಅಂತಿಮ ಪಟ್ಟಿ ಅನುಮೋದನೆಯಾಗುವ ಸಾಧ್ಯತೆ ಇದೆ ಎಂದರು.

ಕೊಪ್ಪಳ ಪ್ರವಾಸದ ನಂತರ ಬೆಳೆಹಾನಿ ಸಮೀಕ್ಷೆ ವರದಿ ತರಿಸಿಕೊಂಡು ಬೆಳೆ ಪರಿಹಾರ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ABOUT THE AUTHOR

...view details